ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪಳ | ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು

Published 6 ಆಗಸ್ಟ್ 2024, 12:38 IST
Last Updated 6 ಆಗಸ್ಟ್ 2024, 12:38 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲ್ಲೂಕಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲೆ ಅಪರಾಧಿ ಬಸವರಾಜ ಮುದ್ಲಾಪುರ ಎಂಬಾತನಿಗೆ ಜಿಲ್ಲಾ ಫೋಕ್ಸೊ ನ್ಯಾಯಾಲಯದ ನ್ಯಾಯಾಧೀಶ ಕುಮಾರ ಡಿ.ಕೆ. ಅವರು 20 ವರ್ಷ ಜೈಲು ಹಾಗೂ ₹20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

2022ರ ಮಾರ್ಚ್‌ 20ರಂದು ಬಸವರಾಜ ಕುಕನೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯನ್ನು ಅಪಹರಿಸಿ ಪಾಳು ಬಿದ್ದ ಕೊಠಡಿಯಲ್ಲಿ ಅತ್ಯಾಚಾರ ಎಸಗಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಯಲಬುರ್ಗಾದ ಆಗಿನ ಸಿಪಿಐ ಎಂ. ನಾಗರೆಡ್ಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT