ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈ ಮೇಲೆ ಬಿಸಿ ಸಾಂಬಾರು ಬಿದ್ದು ಗಾಯ

Last Updated 23 ಸೆಪ್ಟೆಂಬರ್ 2022, 15:28 IST
ಅಕ್ಷರ ಗಾತ್ರ

ಕುಷ್ಟಗಿ (ಕೊಪ್ಪಳ): ಅಡುಗೆ ತಯಾರಿಸುತ್ತಿದ್ದ ವೇಳೆ ಬಿಸಿಯಾದ ಬೇಳೆ ಸಾಂಬಾರ್ ಮೈಮೇಲೆ ಬಿದ್ದು ಡಿ ದರ್ಜೆ ನೌಕರ ತೀವ್ರವಾಗಿ ಗಾಯೊಂಡಿರುವ ಘಟನೆ ಗುರುವಾರ ರಾತ್ರಿ ಪಟ್ಟಣದ ಪರಿಶಿಷ್ಟ ವರ್ಗಗಳ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವಸತಿ ನಿಲಯದಲ್ಲಿ ನಡೆದಿದೆ.

ಹೊರಗುತ್ತಿಗೆಯ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಅಡುಗೆ ಸಹಾಯಕ ಶಿವಕುಮಾರ ಗಾಯಗೊಂಡವರು.

ಪಟ್ಟಣದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿರುವುದರಿಂದ ಹುಬ್ಬಳ್ಳಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ವಿಷಯ ಕುರಿತು ವಿವರಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ವೀರಪ್ಪ ಛತ್ರದ, ಮೂರು ಜನ ಅಡುಗೆ ಸಹಾಯಕರು ಕೆಲಸ ನಿರ್ವಹಿಸುತ್ತಿದ್ದಾರೆ, ಒಲೆಯ ಮೇಲಿಂದ ಪಾತ್ರೆ ಇಳಿಸುವಾಗ ಆಕಸ್ಮಿಕವಾಗಿ ಬಿಸಿ ಸಾಂಬರ್ ಎದೆ ಮೈಮೇಲೆ ಬಿದ್ದಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT