ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಜ್ವರದ ಹಾವಳಿಗೆ ಬೆಚ್ಚಿಬಿದ್ದ ಗ್ರಾಮಸ್ಥರು

Published 8 ಫೆಬ್ರುವರಿ 2024, 16:16 IST
Last Updated 8 ಫೆಬ್ರುವರಿ 2024, 16:16 IST
ಅಕ್ಷರ ಗಾತ್ರ

ಕುಷ್ಟಗಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ನೆರಬೆಂಚಿ ಗ್ರಾಮದ ಜನರಲ್ಲಿ ಅನೇಕ ದಿನಗಳಿಂದ ಅನಾರೋಗ್ಯ ಕಾಡುತ್ತಿದ್ದು, ಅಲ್ಲಿನ ಬಹುತೇಕ ಜನ ಜ್ವರದಿಂದ ಬಳಲುತ್ತಿದ್ದಾರೆ. ಅವರಲ್ಲಿ ಒಬ್ಬರಿಗೆ ಚಿಕೂನ್‌ಗುನ್ಯಾ ದೃಢಪಟ್ಟಿದೆ.

ಗ್ರಾಮದಲ್ಲಿ ಇಲ್ಲಿಯವರೆಗೆ 111 ಜ್ವರ ಬಾಧೆ ಪ್ರಕರಣಗಳು ವರದಿಯಾಗಿದ್ದು ಜ್ವರ, ಮೈ, ಕೈ, ಕೀಲು ನೋವು ಸಮಸ್ಯೆಗಳು ಕಾಣಿಸಿಕೊಂಡಿವೆ.

ಗ್ರಾಮದಲ್ಲಿ ಕುಡಿಯುವ ನೀರು ಅಶುದ್ಧವಾಗಿರುವುದು, ನೈರ್ಮಲ್ಯ ಕೊರತೆ, ಮಾಲಿನ್ಯ ಸಮಸ್ಯೆ ಬಗ್ಗೆ ಜನ ದೂರುತ್ತಿದ್ದಾರೆ. ಸೊಳ್ಳೆಯಿಂದ ಸೋಂಕು ಹರಡುತ್ತಿದ್ದು, ಮನೆಗಳಲ್ಲಿ ಬಹುದಿನಗಳಿಂದ ಸಂಗ್ರಹಿಸಿಟ್ಟುಕೊಂಡಿರುವ ಶುದ್ಧ ನೀರಿನಲ್ಲಿ ಇಂಥ ಸೊಳ್ಳೆಗಳ ಲಾರ್ವಾಗಳು ಇರುತ್ತವೆ. ಆದರೆ, ಆರೋಗ್ಯ ಇಲಾಖೆ ಸಿಬ್ಬಂದಿ ಮನೆಯೊಳಗೆ ಬರುವುದಕ್ಕೆ ಗ್ರಾಮಸ್ಥರು ಅವಕಾಶ ನೀಡುತ್ತಿಲ್ಲ ಎಂದು ತಿಳಿದುಬಂದಿದೆ. ಕೊಪ್ಪಳ ಡಿಎಚ್‌ಒ ಡಾ.ಲಿಂಗರಾಜು ಗುರುವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT