ಕುಕನೂರು (ಕೊಪ್ಪಳ ಜಿಲ್ಲೆ): ಮಕ್ಕಳಾಗಲಿಲ್ಲ ಎನ್ನುವ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ತಾಲ್ಲೂಕಿನ ಅರಕೇರಿ ಗ್ರಾಮದಲ್ಲಿ ಕೇಳಿಬಂದಿದೆ.
.ರೇಣುಕಸ್ವಾಮಿ ಕೊಲೆ ಪ್ರಕರಣ: ಅಶ್ಲೀಲ ಸಂದೇಶಗಳ ಸ್ಕ್ರೀನ್ ಶಾಟ್, ಆಡಿಯೊ ಪತ್ತೆ.
ವಿವಾಹ ಪೂರ್ವದಿಂದಲೂ ಸಂಬಂಧಿಕರೇ ಆಗಿದ್ದ ಕೊಲೆ ಆರೋಪಿ ಅರಕೇರಿ ಗ್ರಾಮದ ದೇವರಡ್ಡೆಪ್ಪ ಭಾವಿಕಟ್ಟಿ ಹಾಗೂ ಗೀತಾ (25) ಆರು ವರ್ಷಗಳ ಹಿಂದೆ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದರು. ಮಕ್ಕಳಾಗದ ಕಾರಣಕ್ಕೆ ಅವರ ನಡುವೆ ಹಲವು ಬಾರಿ ಸಂಘರ್ಷವಾಗಿತ್ತು. ಸೆ. 7ರಂದು ತಡರಾತ್ರಿ ತಮ್ಮ ಮನೆಯಲ್ಲಿ ಪತ್ನಿಗೆ ಕಟ್ಟಿಗೆಯಿಂದ ಮುಖಕ್ಕೆ ಹೊಡೆದು ಪತಿ ಗಾಯಗೊಳಿಸಿ ಕೊಲೆ ಮಾಡಿದ್ದಾನೆ ಎಂದು ಮೃತ ಗೀತಾ ಅವರ ಸಹೋದರ ಸಿದ್ದರೆಡ್ಡಿ ಗಿರಡ್ಡಿ ಇಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಾಗಿದೆ.
.ಪಾವಗಡ | ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಕೊಲೆ ಶಂಕೆ.
ಆರೋಪಿ, ಅವರ ತಂದೆ ಮಲ್ಲಾರಡ್ಡೆಪ್ಪ ಭಾವಿಕಟ್ಟಿ ಹಾಗೂ ಇತರರು ಗೀತಾ ಅವರ ಪೋಷಕರಿಗೆ ಸುಳ್ಳುಹೇಳಿ ಅವಸರದಿಂದಲೇ ಮೃತದೇಹವನ್ನು ಸುಟ್ಟು ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು.

ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗೀತಾ ಅವರ ತಂದೆ ಈಶಪ್ಪ ‘ಮಾವನ ಮಗನಿಗೇ ಮಗಳನ್ನು ಕೊಟ್ಟಿದ್ದೆ. ಎರಡು ದಿನಗಳ ಹಿಂದೆ ರಾತ್ರಿ ನಮ್ಮ ಮನೆಗೆ ಬಂದು ಊಟ ಮಾಡಿ ಗಂಡನ ಮನೆಗೆ ಹೋಗಿದ್ದಳು. ರಾತ್ರಿ ವೇಳೆ ಕುಡಿದು ಬಂದ ಗಂಡ ಆಕೆಯನ್ನು ಹೊಡೆದು ಕೊಂದಿದ್ದಾನೆ. ಆಕೆಗೆ ಮಕ್ಕಳಾಗಿಲ್ಲ ಎನ್ನುವ ಒಂದು ಕಾರಣಕ್ಕೆ ಆಕೆಯನ್ನು ಕೊಂದಿದ್ದಾನೆ’ ಎಂದು ಆರೋಪಿಸಿದರು.
.ಗೋಕಾಕ | ದೇವಸ್ಥಾನದಲ್ಲಿ ಮಲಗಿದ್ದ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿದ ವೃದ್ಧ .
ಘಟನೆ ಸಂಬಂಧ ಅಪ್ಪ ಹಾಗೂ ಮಗನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.