ಕೊಪ್ಪಳ: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಭಾನುವಾರ ಅಹಮದಾಬಾದ್‌ನಲ್ಲಿ ನಡೆಯಲಿರುವ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯವನ್ನು ದೊಡ್ಡ ಪರದೆಯ ಮೇಲೆ ವೀಕ್ಷಿಸಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿದ್ದು, ಇದು ಇಲ್ಲಿನ ಕ್ರಿಕೆಟ್ ಪ್ರೇಮಿಗಳ ಖುಷಿಗೆ ಕಾರಣವಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ದೊಡ್ಡ ಎಲ್‌ಇಡಿ ಸ್ಕ್ರೀನ್ ಹಾಗೂ ಸೌಂಡ್ ವ್ಯವಸ್ಥೆ ಮಾಡಿಕೊಂಡಿದೆ.
‘ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳು ಮತ್ತು ಕ್ರೀಡಾಸಕ್ತರಿಗೆ ವಿಶ್ವಕಪ್ ಫೈನಲ್ ಪಂದ್ಯ ನೋಡಲು ವ್ಯವಸ್ಥೆ ಮಾಡಿದ್ದೇವೆ. ಎಲ್ಲರಿಗೂ ಉಚಿತ ಪ್ರವೇಶವಿದೆ. ಮಧ್ಯಾಹ್ನ 2 ಗಂಟೆಯಿಂದ ನೇರಪ್ರಸಾರ ಆರಂಭವಾಗಲಿದೆ’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.