ಗಂಗಾವತಿ: ಬೆಂಗಳೂರಿನಲ್ಲಿ ಮೆ 25ರಂದು ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಸಭೆಗೆ ಗೈರಾದ ಕಾರಣಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್ ಶ್ರೀನಾಥ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಬಗ್ಗೆ ಚರ್ಚಿಸಲು, ಮತದಾರರಿಗೆ ಅನ್ಯಾಯವಾಗದಂತೆ ಮಾಡಲು, ಅಕ್ರಮ ತಡೆಯಲು ಕೆಪಿಸಿಸಿ ಬೆಂಗಳೂರಿನಲ್ಲಿ ಒಂದು ಸಭೆ ಆಯೋಜಿಸಿ, ಕೆಪಿಸಿಸಿ ಪದಾಧಿಕಾರಿಗಳಿಗೆ ಸಭೆ ಹಾಜರಾಗಲು ಸೂಚನೆ ಹೊರಡಿಸಿತ್ತು.

ಕೆಪಿಸಿಸಿ ಉಪಾಧ್ಯಕ್ಷರು ಸೇರಿ ಬಹುತೇಕ ಪ್ರಧಾನ ಕಾರ್ಯದರ್ಶಿಗಳು ಸಭೆಗೆ ಗೈರಾಗಿದ್ದರು. ಈ ನಡೆಗೆ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದ್ದು, ಕರ್ನಾಟಕ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ನಿರ್ದೇಶನದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ಕೆಪಿಸಿಸಿ ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳನ್ನು ಅವರ ಜವಾಬ್ದಾರಿಗಳಿಂದ ಬಿಡುಗಡೆ ಮಾಡಿ, ಆದೇಶ ಹೊರಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-35-1415617578

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.