ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ ಪರೀಕ್ಷೆ: ಚೇತನ್‌ ಬಾವಿಕಟ್ಟಿ ಸಾಧನೆ

Last Updated 25 ಡಿಸೆಂಬರ್ 2019, 12:41 IST
ಅಕ್ಷರ ಗಾತ್ರ

ಕುಕನೂರು: ಪಟ್ಟಣದ ಚೇತನ್‌ ಬಾವಿಕಟ್ಟಿ ಅವರು ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಬಡ ಕುಟುಂಬದಲ್ಲಿ ಜನಿಸಿದ ಚೇತನ್ ಕಷ್ಟಗಳ ಮಧ್ಯೆಯೇ ಬೆಳೆದು ಬಂದಿದ್ದಾರೆ.
ತಂದೆ ನಾಗಪ್ಪ ಕೂಲಿ, ನಾಲಿ ಮಾಡಿ ಮಗನನ್ನು ಓದಿಸಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಪಟ್ಟಣದಲ್ಲಿಯೇ ಪೂರೈಸಿ, ಹೆಚ್ಚಿನ ವಿದ್ಯಾಭ್ಯಾಸವನ್ನು ಮೈಸೂರಿನ ಎನ್‌ಸಿಇ ಕಾಲೇಜಿನಲ್ಲಿ
ಎಂಜಿನಿಯರಿಂಗ್‌ ಪದವಿ ಪಡೆದಿದ್ದಾರೆ. ಎರಡನೇ ಪ್ರಯತ್ನದಲ್ಲಿಉತ್ತೀರ್ಣರಾಗಿದ್ದಾರೆ. ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ನಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೆನರಾ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಸ್ಪರ್ಧಾತ್ಮಕಪರೀಕ್ಷೆಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದ ಇವರು, ಇದನ್ನೇ ಸವಾಲಾಗಿ ಸ್ವೀಕರಿಸಿ ಈಗಗ್ರೇಡ್-1 ಮುಖ್ಯಾಧಿಕಾರಿಯಾಗಿ ಆಯ್ಕೆಗೊಂಡಿದ್ದು, ಅವರ ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ.

‘ಚೇತನ್ ನಮ್ಮ ಪಟ್ಟಣಕ್ಕೆ ಕೀರ್ತಿ ತಂದಿದ್ದಾರೆ. ಬ್ಯಾಂಕ್ ಉದ್ಯೋಗದಲ್ಲಿ ಇದ್ದರೂ ಸಾರ್ವಜನಿಕ ಕ್ಷೇತ್ರದಲ್ಲಿನ ಸೇವೆಗೆ ಕೆಪಿಎಸ್‌ಸಿ ಆಯ್ಕೆ ಮಾಡಿಕೊಂಡಿದ್ದರು. ಇನ್ನೂ ಮುಂದೆ ಹೆಚ್ಚಿನ ಪರೀಕ್ಷೆಯಲ್ಲಿ ಅವರು ಸಾಧನೆ ಮಾಡಲಿದ್ದಾರೆ ಎಂಬ ಭರವಸೆ ಇದೆ' ಎಂದು ಚೇತನ್ ಅವರ ಬಾಲ್ಯ ಸ್ನೇಹಿತ, ಯುವ ಮುಖಂಡ ಶ್ರೀಧರ ಮುಂದಲಮನಿಹೇಳುತ್ತಾರೆ. ‘ನನ್ನೆಲ್ಲ ಸಾಧನೆಗೆ ನನ್ನ ತಂದೆ–ತಾಯಿ, ಸ್ನೇಹಿತರ ಸಹಕಾರವಿದೆ. ಇದು ಸ್ಪರ್ಧಾತ್ಮಕ ಯುಗ, ಪ್ರಚಲಿತ ಘಟನೆಗಳನ್ನು ನಾವು ತಿಳಿದುಕೊಳ್ಳಲೇ ಬೇಕು. ಹೆಚ್ಚಿನ ಓದು ನಮಗೆ ಪರೀಕ್ಷೆಯನ್ನು ಎದುರಿಸಲು ಆತ್ಮವಿಶ್ವಾಸ ಮೂಡಿಸುತ್ತದೆ. ಪರೀಕ್ಷೆಯಲ್ಲಿ ಅನುತ್ತೀರ್ಣನಾದರೂ ಇನ್ನೊಮ್ಮೆ ಜಯ ಸಿಗುತ್ತದೆ ಎಂಬ ವಿಶ್ವಾಸವಿತ್ತು. ನನ್ನ ನಂಬಿಕೆ ಸುಳ್ಳಾಗಲಿಲ್ಲ’ ಎಂದು ಚೇತನ್ ಪತ್ರಿಕೆಗೆ
ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT