ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಯರಡೋಣ, ಮುಸ್ಟೂರ: ರೈತ ಬಂಧು ಅಭಿಯಾನ, ಜಾಗೃತಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯರಡೋಣ, ಮುಸ್ಟೂರ (ಕಾರಟಗಿ): ’ರಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆಯಿಂದ ಜಮೀನಿನ ಫಲವತ್ತತೆ ಕಡಿಮೆಯಾಗುವ ಅಪಾಯವಿದೆ. ರೈತರು ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು‘ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಎನ್. ನರಸಪ್ಪ ರೈತರಿಗೆ ಕರೆ ನೀಡಿದರು.

ತಾಲೂಕಿನ ಯರಡೋಣ ಗ್ರಾಮದಲ್ಲಿ ಪೌಷ್ಟಿಕ ತೋಟ ಮತ್ತು ರೈತ ಬಂಧು ವಿಶೇಷ ಅಭಿಯಾನದ ನಿಮಿತ್ಯ ಮನೆ, ಮನೆಗಳಿಗೆ ತೆರಳಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವ ಜಾಗೃತಿ ಜಾಥಾಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶಗೌಡ ಹಾಗೂ ಕಾರಟಗಿ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಮೇಘಾಶ್ರೀ ಅವರು, ಯೋಜನೆಯ ಕುರಿತು ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ, ನರೇಗಾ ಐಇಸಿ ಸಂಯೋಜಕ ಸೋಮನಾಥ್, ಕಾರ್ಯದರ್ಶಿ ಹನುಮಂತಪ್ಪ, ಸಿಬ್ಬಂದಿ ಗ್ಯಾನಪ್ಪ , ರಮೇಶ, ದೊಡ್ಡಬಸಪ್ಪ ಇದ್ದರು.

ಮುಷ್ಟೂರ: ಗ್ರಾಮ ಪಂಚಾಯಿತಿಯಿಂದ ನರೇಗಾ ಯೋಜನೆಯಡಿ ಮಹಿಳಾ ಕಾಯಕೋತ್ಸವದಡಿ ನಾಲಾ ಹೂಳೆತ್ತುವ ಕಾಮಗಾರಿಯಲ್ಲಿದ್ದ ಮಹಿಳಾ ಕಾರ್ಮಿಕರಿಗೆ ರೈತ ಬಂಧು ಅಭಿಯಾನ ಕುರಿತು ಮಾಹಿತಿ ನೀಡಲಾಯಿತು.

ರೈತರು ಹತ್ತಿರದ ಗ್ರಾಮ ಪಂಚಾಯಿತಿ, ಕೃಷಿ ಇಲಾಖೆಗೆ ಭೇಟಿ ನೀಡಿ, ಕಾಮಗಾರಿಯ ನೋಂದಣಿ ಮಾಡಿಸಿ, ತಮ್ಮ ಹೊಲ, ಮನೆಗಳಲ್ಲಿ ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ ಮಾಡಿಕೊಳ್ಳಬೇಕು ಎಂದರು.

ತಾಲ್ಲೂಕು ನರೇಗಾ ಐಇಸಿ ಸಂಯೋಜಕ ಸೋಮನಾಥ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಂಯೋಜಕ ಬಸವರಾಜ, ಅಭಿವೃದ್ದಿ ಅಧಿಕಾರಿ ಪ್ರಕಾಶ ಸಜ್ಜನ್‌ ಸಿಬ್ಬಂದಿ ಫಕೀರಪ್ಪ, ದೇವರಾಜ್, ಮಂಜುನಾಥ್, ಸೋಮನಾಥ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.