ಕುಕನೂರು: ಕಳೆದ ಕೆಲವು ದಿನಗಳ ಹಿಂದೆ ಸುರಿದ ಅಕಾಲಿಕ ಮಳೆಯಿಂದ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಬೆಳೆದ ಮಾವು ನಾಶವಾಗಿದೆ. ಸರ್ಕಾರ ಪರಿಹಾರ ನೀಡಬೇಕು ಎಂದು ರೈತರು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರಿಗೆ ಮನವಿ ಸಲ್ಲಿಸಿದರು.

ರೈತ ಮುಖಂಡ ಈಶಪ್ಪ ಅಂಗಡಿ ಮಾತನಾಡಿ, ‘ರೈತರಿಗೆ ಈ ಬಾರಿ ಸಾಕಷ್ಟು ಬೆಳೆ ಹಾನಿಯಾಗಿದೆ. ಮಾವಿನ ಬೆಳೆ ಹಾನಿಗೊಳಗಾಗಿದ್ದಕ್ಕಾಗಿ ಪರಿಹಾರ ನೀಡಬೇಕು. ನೀರಾವರಿ ಬೆಳೆಗಳೂ ಹಾಳಾಗಿವೆ. ಪರಿಹಾರ ಮತ್ತು ಬೆಳೆವಿಮೆ ನೀಡಬೇಕು. ಬೆಳೆ ಪರಿಹಾರ ನೀಡುವಲ್ಲಿ ಯಾವುದೇ ತಾರತಮ್ಯ ಮಾಡದೇ ಆದಷ್ಟು ಬೇಗನೆ ಪರಿಹಾರ ಒದಗಿಸಬೇಕು’ ಎಂದು ಮನವಿ ಸಲ್ಲಿಸಿದರು.

ದ್ಯಾಮಣ್ಣ ಜಮಖಂಡಿ, ಗಿರೀಶ ದೇಸಾಯಿ, ಅಡವಿರಾವ್ ದೇಸಾಯಿ, ಮಹೇಶ ಬಾರಕೇರ, ಶ್ರೀಕಾಂತ ಪೂಜಾರ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-35-732806276

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.