ಕುಕನೂರು: ‘ಶಾಲೆಗಳು ಆರಂಭವಾಗುತ್ತಿದ್ದು, ಮಕ್ಕಳನ್ನು ಪ್ರೀತಿಯಿಂದ ಸ್ವಾಗತಿಸುವುದರ ಜತೆಗೆ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕು. ಸ್ವಚ್ಛತೆ ಮತ್ತು ಮಕ್ಕಳ ಸುರಕ್ಷತೆಗೆ ಒತ್ತು ಕೊಡಿ’ ಎಂದು ಡಿಡಿಪಿಐ ಸೋಮಶೇಖರ್ ಗೌಡ ಪಾಟೀಲ ಹೇಳಿದರು.

2026-27ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳ ಆರಂಭದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಇಲ್ಲಿ ಶನಿವಾರ ನಡೆದ ತಾಲ್ಲೂಕಿನ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.

‘ದಾಖಲಾತಿ ಆಂದೋಲನ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಶಾಲೆಗೆ ದಾಖಲಾಗುವಂತೆ ನೋಡಿಕೊಳ್ಳಬೇಕು. ಸರ್ಕಾರ ಕೊಡುವ ಸೌಲಭ್ಯಗಳನ್ನು ತಿಳಿ ಹೇಳಿ ದಾಖಲಾತಿ ಹೆಚ್ಚಿಸುವಲ್ಲಿ ಶ್ರಮ ಪಡಬೇಕಿದೆ’ ಎಂದರು.

‘ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಬೇಕು. ಶಾಲೆಯಲ್ಲಿ ಮೊದಲ ದಿನ ಮಕ್ಕಳಿಗೆ ಸಿಹಿ ಊಟ ಮಾಡಿಸಬೇಕು. ಶಾಲೆ ಪ್ರಾರಂಭೋತ್ಸವಕ್ಕೆ ಮುನ್ನ ಶಾಲಾ ಆವರಣ, ಶೌಚಾಲಯ, ಅಡುಗೆ ಮನೆ, ಶಾಲಾ ಕೊಠಡಿಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಗ್ರಾಮದ ಎಸ್ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕರ ಸಹಕಾರ ಪಡೆದು ಸ್ವಚ್ಛತಾ ಕಾರ್ಯ ನಡೆಸಿ’ ಎಂದು ಸೂಚಿಸಿದರು.

ತರಗತಿಗಳು ಸಮರ್ಪಕವಾಗಿ ನಡೆಯಲು ಶಾಲಾ ವೇಳಾಪಟ್ಟಿ ಸಿದ್ಧಪಡಿಸಿಕೊಳ್ಳಿ. ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸುವುದು ಮುಖ್ಯ ಶಿಕ್ಷಕರ ಜವಾಬ್ದಾರಿ. ಶಾಲೆಗಳನ್ನು ಆಕರ್ಷಣೀಯಗೊಳಿಸಿ. ಗ್ರಂಥಾಲಯ, ಗಣಕಯಂತ್ರ, ಪ್ರಯೋಗಾಲಯ ಎಲ್ಲವೂ ಸುಸಜ್ಜಿತವಾಗಿರಬೇಕು’ ಎಂದರು.

ಬಾಬರ್ ಸವದತ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್, ಅಕ್ಷರ ದಾಸೋಹ ಸಮನ್ವಯಾಧಿಕಾರಿ ಟಿ.ಜೆ ದಾನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-35-390250682

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.