ಕುಕನೂರು: ತಾಲ್ಲೂಕಿನ ಮಂಗಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಯಲಬುರ್ಗಾ ತಾಲ್ಲೂಕಿನ ಹೊಸಳ್ಳಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಶನಿವಾರ ತಾಲ್ಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾವಳಿ ನಡೆದವು.
ಕೆಪಿಎಸ್‌ಸಿ ಶಾಲೆ ಮುಖ್ಯ ಶಿಕ್ಷಕಿ ಶಕುಂತಲಾ ಪಾಟೀಲ, ಸಿಆರ್‌ಪಿ ರವಿ ಡಿ. ಮಳಗಿ, ಸೋಮಪ್ಪ ನಾಯಕ, ಶ್ರೀದೇವಿ ಮಾಚಕನೂರು, ಪನ್ನಗ ದೇಶಪಾಂಡೆ, ಆನಂದ ಚಿನ್ನೂರ, ಎಸ್‌ಡಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ, ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು, ಕ್ರೀಡಾ ಪ್ರೇಮಿಗಳುˌ ಶಿಕ್ಷಕರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.