ಕುಕನೂರು: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಗುದ್ನೇಪ್ಪನಮಠಕ್ಕೆ ಸೇರಿದ ಜಮೀನಿನಲ್ಲಿ ಸರ್ಕಾರಿ ಕಟ್ಟಡ ನಿರ್ಮಾಣ ವಿರೋಧಿಸಿ ಸಲ್ಲಿಕೆಯಾಗಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಸಾರ್ವಜನಿಕ ಹಿತದೃಷ್ಟಿಯಿಂದ ನಡೆಯಲಿರುವ ಅಭಿವೃದ್ಧಿ ಕೆಲಸಗಳಿಗೆ ಎದುರಾಗಿದ್ದ ಕಾನೂನು ಕಂಟಕ ನಿವಾರಣೆ ಆದಂತಾಗಿದೆ.

ಹಿನ್ನೆಲೆ: ಕುಕನೂರಿನ ಗುದ್ನೇಪ್ಪನ ಮಠಕ್ಕೆ ಸೇರಿದ ಜಮೀನಿನ ಒಂದು ಭಾಗದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡಗಳ ನಿರ್ಮಾಣಕ್ಕೆ ಆಡಳಿತ ಮಂಡಳಿ ಹಾಗೂ ಸರ್ಕಾರ ನಿರ್ಧರಿಸಿತ್ತು. ಆದರೆ, ಈ ನಿರ್ಧಾರವನ್ನು ಪ್ರಶ್ನಿಸಿ ಮತ್ತು ಜಮೀನಿನ ಮಾಲೀಕತ್ವದ ಕುರಿತು ಆಕ್ಷೇಪವೆತ್ತಿ ಗುದ್ನೇಪ್ಪನ ಮಠದ ಗ್ರಾಮಸ್ಥರು ನ್ಯಾಯಾಲಯದಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು. ಇದರಿಂದಾಗಿ ಉದ್ದೇಶಿತ ಸರ್ಕಾರಿ ಕಟ್ಟಡಗಳ ಕಾಮಗಾರಿ ಶಂಕು ಸ್ಥಾಪನೆ ಸ್ಥಗಿತಗೊಂಡಿತ್ತು.

ಪ್ರಕರಣದ ವಿಚಾರಣೆ: ನ್ಯಾಯಾಲಯವು, ಅರ್ಜಿದಾರರು ಮಂಡಿಸಿದ ವಾದದಲ್ಲಿ ಪೂರಕ ದಾಖಲೆ ಇಲ್ಲದಿರುವುದನ್ನು ಗಮನಿಸಿತು. ಸಾರ್ವಜನಿಕ ಹಿತಾಸಕ್ತಿ ಹೊಂದಿರುವ ವ್ಯಾಜ್ಯವಾಗಿದೆ. ಮಠದ ಜಮೀನಿನಲ್ಲಿ ನಿರ್ಮಾಣವಾಗುವ ಕಟ್ಟಡಗಳು ಸಾರ್ವಜನಿಕ ಸೇವೆಗೆ ಸಂಬಂಧಿಸಿವೆ ಎಂಬ ಅಂಶವನ್ನು ಪರಿಗಣಿಸಿದೆ. ಮಠದ ಆಸ್ತಿಯ ದುರ್ಬಳಕೆಯಾಗುತ್ತಿದೆ ಎಂಬ ಅರ್ಜಿದಾರರ ಆರೋಪಕ್ಕೆ ಸರಿಯಾದ ಸಾಕ್ಷ್ಯಾಧಾರಗಳಿಲ್ಲದ ಕಾರಣ ಅರ್ಜಿಯನ್ನು ವಜಾಗೊಳಿಸಲಾಗಿದೆ. ಮಠದ ಸಮ್ಮತಿಯೊಂದಿಗೆ ನಡೆಯುತ್ತಿರುವ ಈ ಕಾಮಗಾರಿಗಳಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಆದೇಶದಿಂದಾಗಿ ಗುದ್ನೆಪ್ಪನ ಮಠದ ಜಮೀನಿನಲ್ಲಿ ನಿರ್ಮಾಣವಾಗಬೇಕಿದ್ದ ತಾಲ್ಲೂಕು ಆಡಳಿತ ಕಚೇರಿ ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳ ಕಟ್ಟಡ ನಿರ್ಮಾಣ ಕಾರ್ಯಕ್ಕೆ ವೇಗ ಸಿಗಲಿದೆ. ಮಠದ ಜಮೀನು ಸಾರ್ವಜನಿಕರ ಸೇವೆಗೆ ಬಳಕೆ ಆಗುತ್ತಿರುವುದು ಸ್ವಾಗತಾರ್ಹ ಎಂದು ಯಮನೂರಪ್ಪ ಕಟ್ಟಿಮನಿ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-35-763652849

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.