ಕುಕನೂರು: ಪಟ್ಟಣ ಪಂಚಾಯಿತಿ ಸುಮಾರು 35 ವರ್ಷಗಳಿಂದ ವಾಣಿಜ್ಯ ಮಳಿಗೆಗಳ ಬಾಡಿಗೆ ಪರಿಷ್ಕರಣೆ ಮಾಡದ ಕಾರಣ ಆದಾಯಕ್ಕೆ ಹೊಡೆತ ಬಿದ್ದಿದೆ.

ಪಟ್ಟಣ ಪಂಚಾಯಿತಿ 20 ವಾಣಿಜ್ಯ ಮಳಿಗೆಗಳನ್ನು ಹೊಂದಿದೆ. ಎಲ್ಲ ಮಳಿಗೆಗಳೂ ಪಟ್ಟಣದ ಹೃದಯ ಭಾಗದಲ್ಲಿವೆ. ಪ್ರತಿ ಮಳಿಗೆ ಬಾಡಿಗೆ ₹1,000ರಿಂದ ₹2,000 ಮಾತ್ರ ಇದೆ. ಖಾಸಗಿ ಮಳಿಗೆಗಳ ಬಾಡಿಗೆ ದರ ₹15 ಸಾವಿರದಿಂದ ₹20 ಸಾವಿರ ಇದೆ.

ಪ್ರತಿ ಮೂರು ವರ್ಷಗಳಿಗೊಮ್ಮೆ ವಾಣಿಜ್ಯ ಮಳಿಗೆಗಳ ಬಾಡಿಗೆ ಪರಿಷ್ಕರಣೆ ಮಾಡಬಹುದು. 2009ರಲ್ಲಿ ಸರ್ಕಾರ ವಾಣಿಜ್ಯ ಮಳಿಗೆಗಳ ಬಾಡಿಗೆ ಪರಿಷ್ಕರಣೆ ಮಾಡುವಂತೆ ಆದೇಶ ನೀಡಿತ್ತು. ಆದರೂ ಪಟ್ಟಣ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉದಾಸೀನ ಮಾಡಿದ್ದಾರೆ. ಆದೇಶಕ್ಕೂ ಬೆಲೆ ನೀಡಿಲ್ಲ ಎಂದು ಜನರು ದೂರುತ್ತಾರೆ.

‘ಈಗ ಪಟ್ಟಣ ಪಂಚಾಯಿತಿಗೆ ವಾಣಿಜ್ಯ ಮಳಿಗೆಗಳಿಂದ ಪ್ರತಿ ತಿಂಗಳು ₹20 ಸಾವಿರದವರೆಗೆ ಆದಾಯ ಬರುತ್ತಿದೆ. ಬಾಡಿಗೆ ಪರಿಷ್ಕರಣೆಯಾಗಿದ್ದರೆ ಅದು 10 ಪಟ್ಟು ಹೆಚ್ಚಾಗಿ ಮಾಸಿಕ ₹2 ಲಕ್ಷದವರೆಗೆ ಬರುತ್ತಿತ್ತು’ ಎನ್ನುತ್ತಾರೆ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ರವೀಂದ್ರ ಬಾಗಲಕೋಟೆ.

‘ವಾಣಿಜ್ಯ ಮಳಿಗೆ ಬಾಡಿಗೆ ಪಡೆದವರು ಉಪ ಬಾಡಿಗೆ ನೀಡಿದ್ದಾರೆ. ದಾಖಲೆಗಳಿಲ್ಲದ ಕಾರಣ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ಪಟ್ಟಣ ಪಂಚಾಯಿತಿ ಆದಾಯಕ್ಕೆ ಹೊಡೆತ ಬೀಳುತ್ತಿದೆ’ ಎಂದು ಹೆಸರು ಹೇಳಲು ಬಯಸದ ಅಧಿಕಾರಿಯೊಬ್ಬರು ತಿಳಿಸಿದರು.

ಸುಮಾರು 35 ವರ್ಷಗಳಿಂದ ಪಟ್ಟಣ ಪಂಚಾಯಿತಿಯ ವಾಣಿಜ್ಯ ಮಳಿಗೆಗಳ ಬಾಡಿಗೆ ಪರಿಷ್ಕರಣೆ ಮಾಡಿಲ್ಲ. ಇದರಿಂದ ಪಂಚಾಯಿತಿ ಆದಾಯಕ್ಕೆ ಹೊಡೆತ ಬಿದ್ದಿದೆ. ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ
ಶಂಕರ ಭಂಡಾರಿ ಪಟ್ಟಣದ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.