ಕುಕನೂರು: ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಮಹನೀಯರ ಮೂರ್ತಿ ಸ್ಥಾಪನೆ ಕಾಮಗಾರಿಗಳಿಗೆ ಒಟ್ಟು ₹1.60 ಕೋಟಿ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದ್ದು, ಕಾಮಗಾರಿಗಳ ಅನುಷ್ಠಾನಕ್ಕೆ ಹಸಿರು ನಿಶಾನೆ ದೊರೆತಿದೆ.

ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಜಗಜ್ಯೋತಿ ಬಸವೇಶ್ವರ ಹಾಗೂ ಡಾ.ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆಗಾಗಿ ಶನಿವಾರ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು ವಿವಿಧ ಪ್ರಮುಖ ಸ್ಥಳಗಳನ್ನು ವೀಕ್ಷಿಸಿದರು.

ಪಟ್ಟಣದ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಲ್ಲಿ ನಡೆಯುತ್ತಿರುವ ಸಮಸ್ಯೆಗಳ ಕುರಿತು ಸ್ಥಳೀಯರೊಂದಿಗೆ ಚರ್ಚಿಸಿ ಸಾರ್ವಜನಿಕರಿಗೆ ಉತ್ತಮ ಸೌಲಭ್ಯ ಒದಗಿಸುವ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.

ತಾಲ್ಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಸಂಗಮೇಶ ಗುತ್ತಿ, ಸತ್ಯನಾರಾಯಣಪ್ಪ ಹರಪ್ಪನಹಳ್ಳಿ, ಯಂಕಣ್ಣ ಯರಾಶಿ, ಹನುಮಂತಪ್ಪ ಚಂಡೂರ, ಸಿದ್ದಯ್ಯ ಕಳ್ಳಿಮಠ, ರಹಿಮಾನಸಾಬ ಮುಕಪ್ಪನವರ ತಾಲ್ಲೂಕು ಪಂಚಾಯತಿ ಇಒ ಸಂತೋಷ್ ಪಾಟೀಲ ಬಿರಾದಾರ, ತಹಶೀಲ್ದಾರ್ ಬಸವರಾಜ್ ಬೆಣ್ಣೆಶಿರೂರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-35-1298202757

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.