ಗುರುವಾರ , ನವೆಂಬರ್ 26, 2020
21 °C
ಅಧ್ಯಕ್ಷರಾಗಿ ಶಂಭು ಜೋಳದ್ ಉಪಾಧ್ಯಕ್ಷರಾಗಿ ಗೀತಾ ಜಂಗ್ಲಿ ಆಯ್ಕೆ

ಕುಕನೂರು ಪ.ಪಂ: ಅಧ್ಯಕ್ಷ ಸ್ಥಾನ ಬಿಜೆಪಿ ಪಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಕನೂರು: ಪಟ್ಟಣದ ಎಪಿಎಂಸಿಯಲ್ಲಿ ಮಂಗಳವಾರ ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಂಭು ಜೋಳದ್ ಹಾಗೂ ಉಪಾಧ್ಯಕ್ಷರಾಗಿ ಗೀತಾ ಜಂಗ್ಲಿ ಆಯ್ಕೆಯಾಗಿದ್ದಾರೆ.

ಪಟ್ಟಣ ಪಂಚಾಯಿತಿಯ ಒಟ್ಟು 20 ಸದಸ್ಯ ಬಲದಲ್ಲಿ ಕಾಂಗ್ರೆಸ್‌ ಪಕ್ಷದ 09 ಸದಸ್ಯರು ಮತ್ತು ಬಿಜೆಪಿಯ 10 ಸದಸ್ಯರು ಇದ್ದರು.

ಬಿಜೆಪಿ ಪಕ್ಷದ ಮುಖಂಡರು ಕಾಂಗ್ರೆಸ್‌ ಸದಸ್ಯನನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ಧಾರೆ. ಆದ್ದರಿಂದ ಅಧಿಕಾರ ಬಿಜೆಪಿ ಪಾಲಾಗಿದೆ.

ಬಿಜೆಪಿ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಶಂಭು ಜೋಳದ್ ಮತ್ತು ಕಾಂಗ್ರೆಸ್‌ ಪಕ್ಷದಿಂದ ರೆಹಮಾನ್ ಸಾಬ್ ಮಕ್ಕಪ್ಪನವರ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷದಿಂದ ಗೀತಾ ಮಹಾತೇಂಶ ಜಂಗ್ಲಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಕಿರಣಕುಮಾರ್ ಕುಲಕರ್ಣಿ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.