ಕುಷ್ಟಗಿ: ಪಟ್ಟಣದಲ್ಲಿ ಮಂಗಳವಾರ ಆದಿ ಶಂಕರಾಚಾರ್ಯರ ಜಯಂತಿಯನ್ನು ಶ್ರದ್ಧೆಯೊಂದಿಗೆ ಆಚರಿಸಲಾಯಿತು.

ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್ವಿಸಿ ಶಿಕ್ಷಣ ಸಂಸ್ಥೆಯ ಯೋಜನಾ ನಿರ್ದೇಶಕ ಅರುಣ ಕರಮರಕರ್ ಮಾತನಾಡಿ, ‘ಸನಾತನ ಧರ್ಮ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆದಿ ಶಂಕರರು ದೇಶದ ಉದ್ದಗಲಕ್ಕೂ ನಡೆಸಿದ ಪ್ರಯತ್ನದ ಫಲವಾಗಿ ಹಿಂದೂ ಧರ್ಮ ಗಟ್ಟಿಯಾಗಿ ನೆಲೆಯೂರಲು ಕಾರಣವಾಗಿದೆ. ಅವರ ತತ್ವ, ಸಂದೇಶಗಳನ್ನು ಮೆಲುಕು ಹಾಕಿ ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

ತಹಶೀಲ್ದಾರ್ ಅಶೋಕ ಶಿಗ್ಗಾವಿ ಅಧ್ಯಕ್ಷತೆ ವಹಿಸಿದ್ದರು. ಬ್ರಾಹ್ಮಣ ಸಮಾಜದ ಪ್ರಮುಖರಾದ ರಾಮಾಚಾರ್ ಪುರಾಣಿಕ, ರಾಘವೆಂದ್ರಾಚಾರ್ ದಿಗ್ಗಾವಿ, ಕೃಷ್ಣಾಚಾರ್ ಪುರೋಹಿತ್, ರಮೇಶ ಯಾಳಗಿ, ರಾಘವೆಂದ್ರ ಜೋಷಿ, ಭೀಮಸೇನರಾವ ಕುಲಕರ್ಣಿ, ಕುಪ್ಪೇರಾವ್, ಕೇಶವ ಕುಲಕರ್ಣಿ, ಸತೀಶ ಕುಲಕರ್ಣಿ, ಹನಮಂತರಾವ ನಾಯಕ ಮತ್ತು ಕಂದಾಯ ಇಲಾಖೆಗಳ ಸಿಬ್ಬಂದಿ ಇದ್ದರು. ಬಲರಾಮ ಜೋಷಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-35-410669799

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.