ಕುಷ್ಟಗಿ: ಮೀನುಗಾರಿಕೆ ಮತ್ತು ಮೀನು ಸಾಕಣೆ ಚಟುವಟಿಕೆಗಳನ್ನು ಉತ್ತೇಜಿಸಲು ಇಲಾಖೆ 2026-27ನೇ ಹಣಕಾಸು ವರ್ಷದಲ್ಲಿ ತಾಲ್ಲೂಕು ವ್ಯಾಪ್ತಿಯ ಮೀನುಗಾರರು ಮತ್ತು ಮೀನುಕೃಷಿಕರಿಗೆ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಕಲ್ಪಿಸಲು ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ವಿತರಣೆಗೆ ಅರ್ಜಿ ಆಹ್ವಾನಿಸಿದೆ.

ಆರ್ಥಿಕ ನೆರವು ಪಡೆಯಲು ಇಚ್ಛಿಸುವ ಅರ್ಹ ಫಲಾನುಭವಿಗಳು ಮೇ 30ರೊಳಗೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಪ್ರತಿಗಳು, ಮೀನುಗಾರಿಕೆ ಚಟುವಟಿಕೆ ನಡೆಸುತ್ತಿರುವ ಕುರಿತು ಸಂಬಂಧಿತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಿಂದ ದೃಢೀಕರಣ ಪತ್ರ ಮತ್ತು ಬ್ಯಾಂಕ್ ಪಾಸ್ಬುಕ್ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿಯೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಕುಷ್ಟಗಿಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಲು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ವಾಕ್ ಇನ್ ಇಂಟರ್ವ್ಯೂವ್

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜೂನ್ 2ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಇಂಟರ್ವ್ಯೂವ್ ಆಯೋಜಿಸಲಾಗಿದೆ.

ಐ.ಟಿ.ಐ ಫಿಟ್ಟರ್, ಐ.ಟಿ.ಐ ವೆಲ್ಡರ್, ಐ.ಟಿ.ಐ ಮೆಕ್ಯಾನಿಕ್, ಐ.ಟಿ.ಐ ಎಲೆಕ್ಟ್ರಿಷಿಯನ್, ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಇತರೆ ಪದವಿ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು. 18ರಿಂದ 25 ವರ್ಷದೊಳಗಿನ ನಿರುದ್ಯೋಗಿ ಪುರುಷರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ದಾಖಲೆಗಳನ್ನು ತರಬೇಕು.

ಉದ್ಯೋಕಾಂಕ್ಷಿಗಳು https:// forms.gle/uJnyp39f6SRzKqhKA ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಮೊದಲ ಮಹಡಿ, ಕೊಪ್ಪಳ ಇಲ್ಲಿಗೆ ಸಂಪರ್ಕಿಸಬೇಕು.

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಪ್ಪಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕೀಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಪಿಯುಸಿ ವ್ಯಾಸಂಗ್ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೆಬ್ಸೈಟ್ https://shp. Karnataka.gov.in/bcwd ಮೂಲಕ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ 8050770004 ಸಂಪರ್ಕಿಸಬಹುದು.

ಕೊಪ್ಪಳ: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮಾಹಿತಿ ಹಕ್ಕು ಅಧಿನಿಯಮ-2005ರ ನಾಮಫಲಕವನ್ನು ಅಳವಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದ ವಿವಿಧ ಕಛೇರಿಗಳಲ್ಲಿ ಮಾಹಿತಿ ಹಕ್ಕು ಅಧಿನಿಯಮದ ನಾಮಫಲಕ ಅಳವಡಿಸಿಲ್ಲ ಎಂದು ಜಿಲ್ಲಾಡಳಿತ ಭವನಕ್ಕೆ ದೂರುಗಳು ಬಂದಿದ್ದರಿಂದ ಎಲ್ಲಾ ಕಚೇರಿಗಳು ಹಾಗೂ ತಮ್ಮ ಅಧೀನದಲ್ಲಿ ಬರುವ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಕಡ್ಡಾಯವಾಗಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಮಾಹಿತಿಯುಳ್ಳ ನಾಮಫಲಕ ಅಳವಡಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-35-1438721370

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.