ಕುಷ್ಟಗಿ: ‘ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಒಂದು ಸಮುದಾಯಕ್ಕೆ ಸೀಮಿತವಾಗಿರದೆ ಇಡಿ ಮನುಕುಲವನ್ನೊಳಗೊಂಡ ಸಮಾಜ ಸಮಷ್ಟಿ ಪ್ರಜ್ಞೆಯೊಂದಿಗೆ ಮುನ್ನಡೆಯುವುದಕ್ಕೆ ದಾರಿದೀಪವಾಗಿದ್ದಾರೆ’ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ತಾಲ್ಲೂಕಿನ ಗುಮಗೇರಾದಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ, ಮಹಾಯೋಗಿ ವೇಮನ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಹೇಮರಡ್ಡಿ ಮಲ್ಲಮ್ಮ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಾಸಾದ್ವಿ ಎನಿಸಿರುವ ಮಲ್ಲಮ್ಮ ಅವರ ತತ್ವ ಮತ್ತು ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ. ಎಲ್ಲ ಸಮುದಾಯಗಳನ್ನೂ ಒಳಗೊಂಡಂತೆ ಕಾರ್ಯಕ್ರಮ ಆಯೋಜಿಸುವ ಮೂಲಕ ರಡ್ಡಿ ಸಮಾಜ ಸಾಮಾಜಿಕ, ಸಾಮರಸ್ಯದ ಸಹಬಾಳ್ವೆಗೆ ಮಾದರಿಯಾಗಿದ್ದು ಇತರೆ ಸಮುದಾಯಗಳಿಗೂ ಅನುಕರಣೀಯ’ ಎಂದರು.

ವಿಶೇಷ ಉಪನ್ಯಾಸ ನೀಡಿದ ಕೊಪ್ಪಳ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಎಸ್.ವಿ.ಡಾಣಿ, ‘ಶಿವಭಕ್ತಿ, ತತ್ವ, ಸಿದ್ಧಾಂತವನ್ನು ಒಳಗೊಂಡ ವೇಮನ, ಹೇಮರಡ್ಡಿ ಮಲ್ಲಮ್ಮ ಅವರ ಬದುಕು ಧಾರ್ಮಿಕ, ಸಾಮಾಜಿಕವಾಗಿ ಶ್ರೇಷ್ಠತೆಯನ್ನು ಹೊಂದಿದೆ. ಅವರನ್ನು ಪ್ರತಿನಿಧಿಸುವ ರಡ್ಡಿ ಸಮುದಾಯ ಸಂಘಟನೆಯ ಜೊತೆಗೆ ಅವರ ಆದರ್ಶಗಳನ್ನು ಪಾಲಿಸಿ ಮುನ್ನಡೆಯಬೇಕು’ ಎಂದರು.

ತುಂಗಭದ್ರಾ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ ಮಾತನಾಡಿ, ‘ಜಯಂತಿಗಳು ಸಮಾಜದ ಮೇಲೆ ಸಕಾರಾತ್ಮಕ ಪರಿಣಾಮ ಬೀರಬೇಕು. ಮಹನೀಯರ ಆದರ್ಶವನ್ನು ಮಾದರಿಯಾಗಿರಿಸಿಕೊಂಡು ಬದುಕಬೇಕು ಎಂದು ಇಂದಿನ ಮಕ್ಕಳಿಗೆ ತಿಳಿಸಿಕೊಡುವುದು ಅಗತ್ಯವಿದೆ’ ಎಂದರು.

ಸಾನ್ನಿಧ್ಯ ವಹಿಸಿದ್ದ ಶಾಂತವೀರ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ‘ವ್ಯಕ್ತಿ ಎಷ್ಟೇ ಉನ್ನತ ಸ್ಥಾನಗಳನ್ನು ಅಲಂಕರಿಸಿದರೂ ಹೊಟ್ಟೆಗೆ ಅನ್ನ ಬೇಕಾಗುತ್ತದೆ. ವಿದ್ಯಾವಂತರಾದರೂ ಕೃಷಿ ಕಾಯಕದಿಂದ ವಿಮುಖರಾಗಬಾರದು. ಸಾಧ್ಯವಾದಷ್ಟು ಕೃಷಿ ಭೂಮಿಗಳನ್ನು ಉಳಿಸಿಕೊಂಡು ಮೂಲ ಕಸುಬನ್ನು ಮರೆಯಬಾರದು’ ಎಂದರು.

ಬಿಜೆಪಿ ಮುಖಂಡ ಕೆ.ಮಹೇಶ್, ಕಾಂಗ್ರೆಸ್ ಮುಖಂಡ ದೊಡ್ಡಬಸನಗೌಡ ಬಯ್ಯಾಪುರ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರಗೌಡ ಮಾಲಿಪಾಟೀಲ ಇತರರು ಕಾರ್ಯಕ್ರಮ ಕುರಿತು ಅನಿಸಿಕೆ ಹಂಚಿಕೊಂಡರು.

ಗ್ರಾಮದಲ್ಲಿ ಹೇಮರಡ್ಡಿ ಮಲ್ಲಮ್ಮ, ವೇಮನ ಭಾವಚಿತ್ರಗಳ ಮೆರವಣಿಗೆ ಸಂಭ್ರಮದೊಂದಿಗೆ ನೆರವೇರಿತು. ವಿವಿಧ ಕಲಾತಂಡಗಳು, ಕುಂಭಹೊತ್ತ ಮಹಿಳೆಯರು ಮೆರವಣಿಗೆಗೆ ಕಳೆ ತಂದರು.

ಮಠಾಧೀಶ ಅಭಿನವ ಕರಿಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾಲ್ಲೂಕು ರಡ್ಡಿ ಸಮಾಜದ ಅಧ್ಯಕ್ಷ ದೊಡ್ಡನಗೌಡ ಪೊಲೀಸಪಾಟೀಲ ಅಧ್ಯಕ್ಷತೆ ವಹಿಸಿದ್ದರು. ರಡ್ಡಿ ಹಾಗೂ ವಿವಿಧ ಸಮುದಾಯಗಳ ಪ್ರಮುಖರು ಕಾರ್ಯಕ್ರಮದಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-35-878251628

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.