ಕುಷ್ಟಗಿ: ಸಮಾಜಕ್ಕೆ ಮೇಲು ಕೀಳು ರಹಿತ ಸಾಮಾಜಿಕ ಸಮಾನತೆಯ ದಾರಿ ತೋರಿದ ಅನೇಕ ಮಹನೀಯರು, ದಾರ್ಶನಿಕರ ಜಯಂತಿಗಳು ಇತ್ತೀಚಿನ ದಿನಗಳಲ್ಲಿ ಬಹುತೇಕ ಆಯಾ ಜಾತಿ ಲೆಕ್ಕಾಚಾರದ ಮೇಲೆಯೇ ನಡೆಯುತ್ತಿರುವುದು ಸರಿಯಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ ಖೇದ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಸೋಮವಾರ ಸರ್ಕಾರದ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಅನೇಕ ಪುಣ್ಯಪುರುಷರು ಜನಿಸಿದ ನಾಡಿನವರು ಎಂದು ಗುರುತಿಸಿಕೊಳ್ಳುವುದು ಹೆಮ್ಮೆಯ ಸಂಗತಿ ಅಷ್ಟೇ ಅಲ್ಲ ಅದು ನಮ್ಮ ಪುಣ್ಯವೂ ಹೌದು. ವಚನ ಸಾಹಿತ್ಯದ ಮೂಲಕ ಸಾಮಾಜಿಕ ಕ್ರಾಂತಿಗೆ ವೈಚಾರಿಕ ಮುನ್ನುಡಿ ಬರೆದ ಬಸವಣ್ಣ ಅವರ ಸಂದೇಶ, ಆದರ್ಶ ಗುಣಗಳು ನಮ್ಮ ದೈನಂದಿನ ಬದುಕಿನ ಭಾಗವಾಗಬೇಕು. ಅಂದರೆ ನಮ್ಮ ಸಮಾಜದಲ್ಲಿ ಕಾಯಕ ಪ್ರಜ್ಞೆ, ಜಾತಿ ರಹಿತ ವ್ಯವಸ್ಥೆ ಬೆಳೆಯುತ್ತದೆ’ ಎಂದರು. ಅಲ್ಲದೆ ಬಸವ ಭವನದ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆಗೆ ಪ್ರಯತ್ನಿಸುವುದಾಗಿ ಹೇಳಿದರು.

ನಿವೃತ್ತ ಶಿಕ್ಷಕ ಹಂಪಣ್ಣ ಗುಡದೂರು ಮಾತನಾಡಿ, ‘ಇಡೀ ನಾಡಿಗೆ ವಚನ ಮೂಲಕ ಸಾರಿದ ಬಸವಣ್ಣನವರ ಕಾರ್ಯ ಎಲ್ಲರೂ ಮೆಚ್ಚಿಗೆಗೆ ಪಾತ್ರರಾಗಿದ್ದಾರೆ’ ಎಂದರು.

ಲಾಲ್ಹುಸೇನ್ ಕಂದಗಲ್ ವಿಶೇಷ ಉಪನ್ಯಾಸ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಕೆ.ಶರಣಪ್ಪ, ತಹಶೀಲ್ದಾರ್ ಅಶೋಕ ಶಿಗ್ಗಾವಿ, ಸರ್ಕಲ್ ಇನ್ಸ್ಪೆಕ್ಟರ್ ವಿಶ್ವನಾಥ ಹಿರೇಗೌಡರ, ಇತರರು ಮಾತನಾಡಿದರು. ಬಿಇಒ ಉಮಾದೇವಿ ಬಸಾಪುರ, ಕಾರ್ಯನಿರ್ವಹಣಾಧಿಕಾರಿ ಪಂಪಾಪತಿ ಹಿರೇಮಠ, ಸಿಡಿಪಿಒ ಯಲ್ಲಮ್ಮ ಹಂಡಿ, ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಟಿ.ಬಸವರಾಜ, ಬಸವ ಸಮಿತಿ ಅಧ್ಯಕ್ಷ ಶಿವಸಂಗಪ್ಪ ಬಿಜಕಲ್, ಗೌರಮ್ಮ ಕುಡತಿನಿ, ಪ್ರಮುಖರಾದ ವಸಂತ ಮೇಲಿನಮನಿ, ಸಂಗನಗೌಡ ಪಾಟೀಲ, ಶಂಕರಗೌಡ ಪಾಟೀಲ ಇತರರು ಹಾಜರಿದ್ದರು. ವಚನ ಗಾಯನ ಸ್ಪರ್ಧೆಯಲ್ಲಿನ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಪ್ರಮುಖ ಬೀದಿಗಳಲ್ಲಿ ಬಸವಣ್ಣ ಅವರ ಭಾವಚಿತ್ರದ ಮೆರವಣಿಗೆ ಸಂಭ್ರಮದೊಂದಿಗೆ ನಡೆಯಿತು. ವಚನ ಸಾಹಿತ್ಯದ ಕಟ್ಟುಗಳನ್ನು ತಲೆಯ ಮೇಲೆ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿ ಗಮನಸೆಳೆದರು. ತುಂಗಭದ್ರಾ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ದೊಡ್ಡಬಸವ ಬಯ್ಯಾಪುರ ಸೇರಿದಂತೆ ಅನೇಕ ಪ್ರಮುಖರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಮೆರವಣಿಗೆಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-35-736737714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.