ಕುಷ್ಟಗಿ: ತಾಲ್ಲೂಕಿನ ಕನಕೊಪ್ಪ ಗ್ರಾಮದಲ್ಲಿ ಮಾಲಿನ್ಯ ಸಮಸ್ಯೆ ಮಿತಿ ಮೀರಿದ್ದು ನೈರ್ಮಲ್ಯ ವ್ಯವಸ್ಥೆ ಸುಧಾರಣೆಗೆ ಗ್ರಾಮ ಪಂಚಾಯಿತಿ ಕ್ರಮ ವಹಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ನೀರು ಪೂರೈಕೆಯಲ್ಲಿ ಅವ್ಯವಸ್ಥೆ ಮುಂದುವರೆದಿದೆ. ನೀರು ಎಲ್ಲೆಂದರಲ್ಲಿ ಪೋಲಾಗುತ್ತಿದೆ. ಕೆಲವೆಡೆ ಜನರಿಗೆ ನೀರು ಸಿಗುವುದಿಲ್ಲ. ಪಂಚಾಯಿತಿ ಕೊಳವೆಬಾವಿಗಳ ಮೋಟರ್ಗಳು ಸದಾ ಚಾಲೂ ಸ್ಥಿತಿಯಲ್ಲಿರುತ್ತವೆ. ಜೆಜೆಎಂ ನೀರು ಪೂರೈಕೆ ವ್ಯವಸ್ಥೆ ಹದಗೆಟ್ಟುಹೋಗಿದೆ. ಬೇಸಿಗೆಯಲ್ಲಿ ಜನರಿಗೆ ಶುದ್ಧ ನೀರಿನ ಕೊರತೆಯೂ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಅಸಮರ್ಪಕವಾಗಿದ್ದು ಕೊಳಚೆ ನೀರು ಸರಾಗವಾಗಿ ಹರಿದುಹೋಗುತ್ತಿಲ್ಲ. ಸಿಮೆಂಟ್ ಕೊಳಾಯಿ ಸುತ್ತಲಿನ ಪ್ರದೇಶ ಬಹಳಷ್ಟು ಗಲೀಜಿನಿಂದ ಕೂಡಿದ್ದು ಜನರು ಅಲ್ಲಿಯೇ ಬಟ್ಟೆ ತೊಳೆಯುತ್ತಿರುತ್ತಾರೆ. ಇನ್ನು ಗ್ರಾಮದ ಒಳಗೆ ದಾರಿ ಮಧ್ಯದಲ್ಲೇ ಕೊಳಚೆ ನೀರು ಸಂಗ್ರಹವಾಗುತ್ತಿದ್ದ ರಸ್ತೆಗಳೆಲ್ಲ ಕೊಳಚೆ ಹೊಂಡಂತಾಗಿವೆ. ಜನರು ಕಸವನ್ನೆಲ್ಲ ರಸ್ತೆಯಲ್ಲೇ ಬಿಸಾಡುವುದರಿಂದ ಮಾಲಿನ್ಯ ಉಂಟಾಗಿದೆ. ಸೊಳ್ಳೆಗಳ ಕಾಟವೂ ವಿಪರೀತವಾಗಿದ್ದು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಕಸ ವಿಲೇವಾರಿಯೂ ಸಮರ್ಪಕವಾಗಿಲ್ಲ ಎಂದು ಗ್ರಾಮಸ್ಥರು ಸಮಸ್ಯೆ ವಿವರಿಸಿದರು.

ಹಿರೇನಂದಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಗ್ರಾಮ ಇದಾಗಿದ್ದು ಸದ್ಯ ಚುನಾಯಿತ ಸದಸ್ಯರು ಅಧಿಕಾರದಲ್ಲಿಲ್ಲ. ಪಂಚಾಯಿತಿ ಅಥವಾ ಇತರೆ ಅಧಿಕಾರಿಗಳು ಇಲ್ಲಿಗೆ ಭೇಟಿ ನೀಡಿಲ್ಲ. ಗ್ರಾಮದ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರೂ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯವಹಿಸಿದೆ ಎಂದು ಗ್ರಾಮಸ್ಥರಾದ ಹನುಮಗೌಡ, ಬಸಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಅಭಿವೃದ್ಧಿ ಅಧಿಕಾರಿ ಶರಣಮ್ಮ ಕುರ್ನಾಳ, ಕನಕೊಪ್ಪ ಗ್ರಾಮದಲ್ಲಿನ ಸಮಸ್ಯೆ ಬಗ್ಗೆ ಮಾಹಿತಿ ಬಂದಿಲ್ಲ. ಆದರೂ ಸ್ಥಳಕ್ಕೆ ಭೇಟಿ ನೀಡಿ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-35-1619355670

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.