ಕುಷ್ಟಗಿ: ತಾಲ್ಲೂಕಿನ ಕನಕೊಪ್ಪ ಗ್ರಾಮದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ವ್ಯವಸ್ಥೆ ಸುಧಾರಿಸುವ ಕೆಲಸ ಕಾಮಗಾರಿಯನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪಂಪಾಪತಿ ಹಿರೇಮಠ ಪರಿಶೀಲಿಸಿದರು.

ಗ್ರಾಮದಲ್ಲಿ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ ಹದಗೆಟ್ಟಿರುವ, ಮಾಲಿನ್ಯ ಸಮಸ್ಯೆ ಹೆಚ್ಚಿರುವುದಕ್ಕೆ ಸಂಬಂಧಿಸಿದಂತೆ ‘ಪ್ರಜಾವಾಣಿ’ ಶನಿವಾರ ‘ಕನಕೊಪ್ಪ ರಸ್ತೆ ಮಧ್ಯೆ ಕೊಳಚೆ ಹೊಂಡ’ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಕಾರಣಕ್ಕೆ ತಾಪಂ ಇಒ ಅವರು ಗ್ರಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದರು.

ನೀರು ಪೂರೈಕೆ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸದ ಕಾರಣ ರಸ್ತೆಯಲ್ಲಿ ನೀರು ನಿಂತು ಗುಂಡಿಗಳು ನಿರ್ಮಾಣವಾಗುತ್ತವೆ. ಅದರಿಂದ ಕೊಳಚೆ ಹೆಚ್ಚಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಈ ವಿಷಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸುವಂತೆ ಸಿಬ್ಬಂದಿಗೆ ಸೂಚಿಸಿದರು.

ನಂತರ ಈ ಕುರಿತು ವಿವರಿಸಿದ ಪಿಡಿಒ ಶರಣಮ್ಮ ಕುರ್ನಾಳ, ಜೆಜೆಎಂ ನೀರು ಪೂರೈಕೆ ಯೋಜನೆ ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಗ್ರಾಮದಲ್ಲಿ ಅಲ್ಲಲ್ಲಿ ಗುಂಡಿಗಳು ಉಂಟಾಗಿವೆ. ರಸ್ತೆಯಲ್ಲಿ ನೀರು ನಿಂತಿರುವುದು, ಜನರಲ್ಲಿ ಅದರಲ್ಲೇ ತ್ಯಾಜ್ಯ ಎಸೆಯುತ್ತಿರುವುದರಿಂದ ಮಾಲಿನ್ಯ ಉಂಟಾಗಿತ್ತು. ಈಗ ಗುಂಡಿ ಮುಚ್ಚಲಾಗಿದೆ, ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲಾಗಿದ್ದು ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಗ್ರಾಮದಲ್ಲಿ ಹಾದು ಹೋಗಿರುವ ರಸ್ತೆ ಲೋಕೋಪಯೋಗಿ ಇಲಾಖೆಗೆ ಸೇರಿದ್ದು ರಸ್ತೆ ದುರಸ್ತಿಗೆ ಇಲಾಖೆಗೆ ಪತ್ರ ಬರೆಯುವುದಾಗಿ ತಿಳಿಸಿದರು.

ಗ್ರಾಪಂ ಪಿಡಿಒ ಶರಣಮ್ಮ ಕುರ್ನಾಳ, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಸಂಗಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-35-159734867

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.