ಕುಷ್ಟಗಿ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಇಲ್ಲಿಯ ಲೋಕೋಪಯೋಗಿ ಇಲಾಖೆ ನೌಕರ, ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹನುಮಂತಪ್ಪ ಈರಪ್ಪ ಮಸ್ಕಿ(56) ಭಾನುವಾರ ಮೃತಪಟ್ಟಿದ್ದಾರೆ.

ಕೆಲ ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಣಗೇರಿ ಗ್ರಾಮದ ಬಳಿ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಅವರಿಗೆ ಪತ್ನಿ, ಮೂವರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ವಣಗೇರಿ ಗ್ರಾಮದಲ್ಲಿ ನಡೆಯಿತು ಎಂದು ಮೂಲಗಳು ತಿಳಿಸಿವೆ. ಅಪಘಾತಕ್ಕೆ ಸಂಬಂಧಿಸಿದ ಪ್ರಕರಣ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-35-1936782159

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.