ಕುಷ್ಟಗಿ: ‘ಬೇಸಿಗೆಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಮುಂಜಾಗ್ರತೆ ವಹಿಸಬೇಕು’ ಎಂದು ತಾ.ಪಂ ಇಒ ಪಂಪಾಪತಿ ಹಿರೇಮಠ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ತಾ.ಪಂನಲ್ಲಿ ಮಂಗಳವಾರ ಕುಡಿಯುವ ನೀರು ಪೂರೈಕೆ ನಿರ್ವಹಣೆ ವಿಷಯಕ್ಕೆ ಸಂಬಂಧಿಸಿದಂತೆ ಗ್ರಾ.ಪಂ ಆಡಳಿತಾಧಿಕಾರಿಗಳು, ಅಭಿವೃದ್ಧಿ ಅಧಿಕಾರಿಗಳು ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ‘ಬೇಸಿಗೆಯಲ್ಲಿ ಅಲ್ಲಲ್ಲಿ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ. ತೊಂದರೆ ಉಲ್ಬಣಗೊಳ್ಳದಂತೆ ಮುಂಜಾಗ್ರತೆ ವಹಿಸಬೇಕು. ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಹೇಳಿದರು.

ಗ್ರಾ.ಪಂ ಆಡಳಿತಾಧಿಗಳು ಹೆಸರಿಗೆ ಮಾತ್ರ ಇರುವುದು ಸರಿಯಲ್ಲ. ತಮಗೆ ಜವಾಬ್ದಾರಿ ಇಲ್ಲ ಎಂಬ ಭಾವನೆಯಿದೆ ಎಂಬುದು ಗಮನಕ್ಕೆ ಬಂದಿದೆ. ಇಂತಹ ವರ್ತನೆ ಇರಕೂಡದು. ಜನರಿಗೆ ಸಮಸ್ಯೆಯಾಗದಂತೆ ನಿಗಾವಹಿಸಬೇಕು. ಈ ವಿಷಯದಲ್ಲಿ ಉದಾಸೀನ ಮಾಡುವುದು ಬೇಡ. ಎಲ್ಲರೂ ಸೇರಿ ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು. ನೀರಿನ ತೊಟ್ಟಿ, ಟ್ಯಾಂಕ್ಗಳನ್ನು ಸ್ವಚ್ಛಗೊಳಿಸುವುದು, ನೈರ್ಮಲ್ಯ ವ್ಯವಸ್ಥೆ ಕಾಪಾಡುವುದು, ಪೂರೈಕೆಯಾಗುವ ನೀರನ್ನು ರಾಸಾಯನಿಕ ಪರೀಕ್ಷೆಗೆ ಒಳಪಡಿಸಿ ಕುಡಿಯಲು ಯೋಗ್ಯ ಎಂಬ ವರದಿ ಬಂದರೆ ಮಾತ್ರ ಸರಬರಾಜು ಮಾಡಬೇಕು’ ಎಂದು ಹೇಳಿದರು.

9 ಗ್ರಾ.ಪಂಗಳಲ್ಲಿನ 16 ಹಳ್ಳಿಗಳು ಸಮಸ್ಯಾತ್ಮಕ ಎಂದು ಗುರುತಿಸಲಾಗಿದ್ದು, ಬೇಸಿಗೆಯಲ್ಲಿ ಕೊಳವೆಬಾವಿಯಲ್ಲಿ ನೀರಿನ ಲಭ್ಯತೆ ಕಡಿಮೆಯಾದರೆ ಪರ್ಯಾಯ ಕ್ರಮಗಳತ್ತ ಗಮನಹರಿಸಬೇಕಾಗುತ್ತದೆ. ಉಚಿತವಾಗಿ ಕೊಳವೆಬಾವಿ ನೀರು ಪೂರೈಸುವುದಕ್ಕೆ ದಾನಿಗಳೂ ಮುಂದೆ ಬರುವವರಿರುತ್ತಾರೆ ಅಂಥವರ ಪಟ್ಟಿ ಸಿದ್ಧಪಡಿಸಿಟ್ಟುಕೊಳ್ಳಬೇಕು. ತೀರಾ ಅನಿವಾರ್ಯವಾದರೆ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದರು. ಬಹುಗ್ರಾಮ ಕುಡಿಯುವ ನೀರು ಪೂರೈಕೆ(ಡಿಬಿಒಟಿ) ಯೋಜನೆ ನಿರ್ವಹಿಸುವ ಎಲ್ ಆಂಡ್ ಟಿ ಕಂಪನಿ ಸಿಬ್ಬಂದಿ ಸಭೆಯಲ್ಲಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-35-1814443405

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.