ಕುಷ್ಟಗಿ: ಪರಿಶಿಷ್ಟ ಜಾತಿಯ ಒಳಮೀಸಲಾತಿ ವಿಚಾರ ಪೂರ್ಣಪ್ರಮಾಣದಲ್ಲಿ ಜಾರಿಗೊಳಿಸುವ ಮೊದಲೇ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ತಾಲ್ಲೂಕಿನ ಮಾದಿಗ ಮಹಾಸಭಾದ ಕಾರ್ಯಕರ್ತರು ಭಾನುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಕೆಲ ಸಮಯದವರೆಗೆ ಸಾಂಕೇತಿಕವಾಗಿ ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ನಂತರ ರಾಜ್ಯ ಹೆದ್ದಾರಿಯಲ್ಲಿ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಪ್ರಮುಖರು ಮಾತನಾಡಿ, ‘ಶೈಕ್ಷಣಿಕ ಸಂಸ್ಥೆಗಳು ಹಾಗೂ ರಾಜ್ಯಾದ್ಯಂತ ಖಾಲಿ ಹುದ್ದೆಗಳನ್ನು ಭರ್ತಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಗೊತ್ತಾಗಿದೆ. ಆದರೆ ಸಚಿವ ಸಂಪುಟದ ತೀರ್ಮಾನದಂತೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಯಾಗುವವರೆಗೆ ಹೊಸ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಬಾರದು ಎಂದು 2024ರ ನವೆಂಬರ್ 25ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ವಸ್ತುಸ್ಥಿತಿ ಹೀಗಿದ್ದರೂ ಹೊಸದಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸುವುದು ಮಾದಿಗ ಸಮುದಾಯಕ್ಕೆ ಸರ್ಕಾರ ದ್ರೋಹ ಬಗೆಯುತ್ತಿದೆ ಎಂದು ಆರೋಪಿಸಿದರು. ಸಮಾಜ ಕಲ್ಯಾಣ ಇಲಾಖೆಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ವಿಫಲರಾಗಿರುವ ಸಚಿವ ಎಚ್.ಸಿ. ಮಹಾದೇವಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು. ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.

ಮಾದಿಗ ಸಮಾಜದ ತಾಲ್ಲೂಕು ಅಧ್ಯಕ್ಷ ನಾಗರಾಜ ಮೇಲಿನಮನಿ, ಅಂಬಣ್ಣ, ವಸಂತ ಮೇಲಿನಮನಿ, ಶುಕರಾಜ ತಾಳಕೇರಿ, ಹರೀಶ, ಶಿವಪುತ್ರಪ್ಪ ಗುಮಗೇರಿ, ಚಂದಾಲಿಂಗಪ್ಪ ಕಲಾಲಬಂಡಿ, ವಕೀಲ ಪಿ.ರಮೇಶ, ನಾಗರಾಜ ನಂದಾಪೂರ, ಮಂಜುನಾಥ ಹುಲ್ಲೂರು, ಕಾಶೀಮಪ್ಪ ಬಿಜಕಲ್, ಹುಸೇನಪ್ಪ ಮುದೇನೂರು, ಪಡಿಯಮ್ಮ, ಕೃಷ್ಣಮೂರ್ತಿ ಟೆಂಗುಂಟಿ, ಅರವಿಂದ ಮೇಲಿನಮನಿ, ಚಂದ್ರು ಹಿರೇಮನಿ, ಶಂಕರ ಕಲ್ಲಬಾವಿ, ಕಂದಕೂರಪ್ಪ ವಾಲ್ಮೀಕಿ, ಶಿವರಾಜ ಕಟ್ಟಮನಿ, ಶಿವಪುಪ್ಪ ಹಂಚಿನಾಳ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.