ಕುಷ್ಟಗಿ: ಬಣ್ಣ ಬಣ್ಣದ ರಂಗೋಲಿ ಬಿಡಿಸುವ ಮೂಲಕ ತಾಲ್ಲೂಕಿನ ಬಿಜಕಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರು ವೈಜ್ಞಾನಿಕ ಪರಿಕಲ್ಪನೆಯನ್ನು ಅನಾವರಣಗೊಳಿಸಿದ್ದು ಶನಿವಾರ ಕಂಡುಬಂದಿತು.

ವಿಜ್ಞಾನ, ಸಮಾಜ ವಿಜ್ಞಾನ ಮತ್ತಿತರೆ ಪಠ್ಯಾಧಾರಿತ ವಿಷಯಗಳ ಮೇಲೆ ಮತ್ತು ಅವರ ಕೌಶಲ ವೃದ್ಧಿಗೆ ಹಾಗೂ ಕ್ರಿಯಾಶೀಲತೆ ಹೆಚ್ಚಿಸುವ ಪ್ರಯತ್ನವಾಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರಿಗೆ ಶಾಲಾ ಆವರಣದಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.

ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡ ಬಾಲಕಿಯರು ತಮ್ಮದೇ ಆದ ಪರಿಕಲ್ಪನೆಯಲ್ಲಿ ವಿವಿಧ ಮಾದರಿಯ, ಪ್ರಕಾರಗಳ ರಂಗೋಲಿಗಳನ್ನು ಬಿಡಿಸಿ ಅವುಗಳಿಗೆ ವಿವಿಧ ಬಣ್ಣ ಅಳವಡಿಸಿದ್ದು ಶಿಕ್ಷಣ ಇಲಾಖೆ ಅಧಿಕಾರಿಗಳಷ್ಟೇ ಅಲ್ಲದೆ ಗ್ರಾಮಸ್ಥರು ಮತ್ತು ಇತರೆ ವಿದ್ಯಾರ್ಥಿಗಳ ಗಮನ ಸೆಳೆದರು. ಅಷ್ಟೇ ಅಲ್ಲ ತಾವು ಭವಿಷ್ಯ ವಿಜ್ಞಾನಿಗಳು ಎಂಬುದನ್ನೂ ನಿರೂಪಿಸಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾದರು. ರಂಗೋಲಿ ಕೇವಲ ಅಲಂಕಾರಕ್ಕಲ್ಲದೆ ಪಠ್ಯಕ್ಕೆ ಸಂಬಂಧಿಸಿದ ವಿಷಯಗಳಾಗಿದ್ದರಿಂದ ವಿದ್ಯಾರ್ಥಿನಿಯರು ಉತ್ಸಾಹದಿಂದಲೇ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು ಕಂಡುಬಂದಿತು.

ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ತಾಲ್ಲೂಕು ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ.ಎಂ.ಗೊಣ್ಣಾಗರ ಮಾತನಾಡಿ,‘ ಬದಲಾಗುತ್ತಿರುವ ವೈಜ್ಞಾನಿಕ ಜಗತ್ತಿಗೆ ಅನುಗುಣವಾಗಿ ವಿದ್ಯಾರ್ಥಿಗಳಲ್ಲಿಯೂ ವೈಜ್ಞಾನಿಕ ಮನೋಭಾವ ಬೆಳೆಸುವುದು ಅವಶ್ಯವಾಗಿದೆ. ನಮ್ಮ ಜೀವನಶೈಲಿಯೂ ವೈಜ್ಞಾನಿಕ ವಿಮರ್ಶೆಗೆ ಒಳಪಡುತ್ತದೆ. ದೈನಂದಿನ ಬದುಕಿನಲ್ಲಿ ನಮ್ಮೊಂದಿಗೆ ಬರೆಯುವ ವಸ್ತುಗಳು, ಸೇವಿಸುವ ಆಹಾರ ಮತ್ತು ಕೆಲಸ ಕಾರ್ಯಗಳಿಗೂ ವಿಜ್ಞಾನದ ತಳಹದಿ ಇದೆ. ಇಂಥ ಸ್ಪರ್ಧೆ ಮಕ್ಕಳಲ್ಲಿನ ಸೃಜನಶೀಲತೆ ಹೆಚ್ಚಿಸಲು ಪ್ರೇರಣೆಯಾಗಲಿದ್ದು ಇತರೆ ಶಾಲೆಗಳಿಗೆ ಇದು ಮಾದರಿಯಾಗಿದೆ’ ಎಂದು ಹೇಳಿದರು.

ಶಿಕ್ಷಣ ಸಂಯೋಜಕ ದಾವಲಸಾಬ್ ವಾಲೀಕಾರ ಇತರರು ಮಾತನಾಡಿದರು. ಕೊರಡಕೇರಿ ಸರ್ಕಾರಿ ಪ್ರೌಢಶಾಲೆ ವಿಜ್ಞಾನ ಶಿಕ್ಷಕ ಶರಣಬಸವ ಮಾಟೂರ, ತಳುವಗೇರಿ ಸರ್ಕಾರಿ ಪ್ರೌಢಶಾಲೆ ವಿಜ್ಞಾನ ಶಿಕ್ಷಕ ರಾಘವೇಂದ್ರ ಗೊಲ್ಲರ ಹಾಗೂ ಕ್ಯಾದಿಗುಪ್ಪ ಸರ್ಕಾರಿ ಪ್ರೌಢಶಾಲೆಯ ಸಮಾಜವಿಜ್ಞಾನ ಶಿಕ್ಷಕ ಹನುಮಂತಸಾ ರಾಯಬಾಗಿ ತೀರ್ಪುಗಾರರಾಗಿದ್ದರು.

ಹತ್ತು ತಂಡಗಳಲ್ಲಿ ವಿದ್ಯಾರ್ಥಿನಿಯರು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ವಿಜ್ಞಾನ ಶಿಕ್ಷಕರಾದ ಶಶಿಧರ ಗೊರೆಬಾಳ, ಪ್ರಸನ್ನಕುಮಾರ ಹಿರೇಮಠ ಇವರು ವಿದ್ಯಾರ್ಥಿನಿಯರಿಗೆ ಮಾರ್ಗದರ್ಶಕರಾಗಿದ್ದರು.

ಎಸ್ಡಿಎಂಸಿ ಅಧ್ಯಕ್ಷ ವೀರನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಬಸವರಾಜ ಬಾಗಲಿ, ಸಿಆರ್ಪಿ ಚಂದಪ್ಪ, ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಗ್ಯಾನಪ್ಪ ರಾಂಪುರ, ದೈಹಿಕ ಶಿಕ್ಷಣ ಶಿಕ್ಷಕಿ ವಿಜಯಲಕ್ಷ್ಮಿ, ಶಿಕ್ಷಕ ಹಂಪಯ್ಯ, ಗ್ರಾಮದ ಮಲ್ಲಪ್ಪ ಕಲಿಕೇರಿ ಇತರರು ಇದ್ದರು. ಶಿಕ್ಷಕ ವಿಜಯಕುಮಾರ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.