ಕುಷ್ಟಗಿ: ‘ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರ. ಮಹಿಳೆಯರಿಗೆ ಸಮಾನತೆ, ಶಿಕ್ಷಣದಲ್ಲಿ ಹೆಚ್ಚಿನ ಅವಕಾಶಗಳು ಸಿಗಬೇಕಿದೆ’ ಎಂದು ಇತಿಹಾಸ ಉಪನ್ಯಾಸಕಿ ಪ್ರಿಯದರ್ಶಿನಿ ಆಮದಿಹಾಳ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸಮಾಜದ ಮುಖ್ಯವಾಹಿನಿಗೆ ಬರುವುದಕ್ಕೆ ಹಿಂದೆ ಅಡೆತಡೆಗಳಿದ್ದವು ಆದರೆ ಈಗ ಕಾಲ ಬದಲಾದಂತೆ ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ಲಭ್ಯವಾಗುತ್ತಿವೆ. ಹೀಗಾಗಿ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ದಾಪುಗಾಲು ಇಡುತ್ತಿದ್ದಾರೆ’ ಎಂದರು.

ಕಾಲೇಜಿನ ಪ್ರಾಚಾರ್ಯೆ ವಿದ್ಯಾವತಿ ಗೋಟೂರು ಮಾತನಾಡಿ, ‘ಮಹಿಳೆಯರ ಸುರಕ್ಷತೆಗೆ ಹಾಗೂ ಆತ್ಮಸ್ಥೈರ್ಯ ವೃದ್ಧಿಸಿಕೊಳ್ಳಲು ಸಮಾಜದ ಸಹಕಾರ ಅಗತ್ಯ’ ಎಂದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿನಿಯರಿಗೆ ನಗದು ಬಹುಮಾನ ವಿತರಿಸಲಾಯಿತು.

ಮಹಿಳಾ ಸಬಲೀಕರಣ ಘಟಕದ ಸಂಚಾಲಕಿ ಅನಿತಾ ಪಾಟೀಲ, ಉಪನ್ಯಾಸಕಿ ಅಂಜುಂ ಮತೀನ್, ದುರುಗೇಶ್, ಸುರೇಶ್, ನಿಂಗಪ್ಪ ಗೋಟೂರು, ಶಿವರಾಜ ಕೋಳೂರು, ಈರಣ್ಣ ಹುರಳಿ, ಅಮೀನ್ಸಾಬ್, ಪ್ರಕಾಶ್, ಪ್ರಕಾಶ್ ಬಳಗಾನೂರ, ಮಂಜುನಾಥ, ಸುರೇಶ ದಡ್ಡಿ ಸೇರಿದಂತೆ ಅನೇಕರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-35-1056608130

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.