ಕುಷ್ಟಗಿ: ‘ಕಾಂಗ್ರೆಸ್ ಉನ್ನತ ಸ್ಥಾನಕ್ಕೆ ಏರಲು ಬಹಳಷ್ಟು ಅವಕಾಶಗಳಿವೆ. ಸ್ಥಳೀಯ ಮಟ್ಟದಲ್ಲಿ ಜನರೊಂದಿಗೆ ಗುರುತಿಸಿಕೊಂಡರೆ ಮಾತ್ರ ಭವಿಷ್ಯದಲ್ಲಿ ನಾಯಕರಾಗಲು ಸಾಧ್ಯ’ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ನಿಗಮ್ ಭಂಡಾರಿ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ತಾಲ್ಲೂಕು ಯುವ ಕಾಂಗ್ರೆಸ್ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಯುವ ಸಮ್ಮೇಳನ ಹಾಗೂ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು,‘ಕಾಂಗ್ರೆಸ್ ಪಕ್ಷ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವ ಕಾರ್ಯಕರ್ತರಿಗೆ ಬೆನ್ನೆಲುಬಾಗಿ ಇರುತ್ತದೆ. ಸ್ಥಳೀಯ ಮಟ್ಟದಲ್ಲಿ ಜನರೊಂದಿಗೆ ಬೆರೆಯುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಬೆಳೆಸಿಕೊಂಡರೆ ಪಕ್ಷದಲ್ಲಿ ಪ್ರಬುದ್ಧ ನಾಯಕತ್ವ ಹೊಂದಲು ಸಾಧ್ಯ’ ಎಂದರು.

‘ರಾಜ್ಯದಲ್ಲಿ ಪಕ್ಷ ಮತ್ತು ಸರ್ಕಾರದೊಂದಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಗಟ್ಟಿಯಾಗಿ ನಿಂತಿರುವ ಕಾರಣಕ್ಕೆ ಸರ್ಕಾರ ಉತ್ತಮ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿದೆ. ಜವಾಬ್ದಾರಿಯುತ ಯುವ ಸಮೂಹ ಹೆಚ್ಚಾದಂತೆ ಪಕ್ಷಕ್ಕೆ ರಾಜನೀತಿ ರೂಪಿಸಲು ಸಹಾಯವಾಗುತ್ತದೆ. ಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಯುವ ಕಾರ್ಯಕರ್ತರು ಮತಗಟ್ಟೆ ಮಟ್ಟದಲ್ಲಿ ಪ್ರವಾಸ ಹಮ್ಮಿಕೊಳ್ಳಬೇಕು’ ಎಂದು ಹೇಳಿದರು.

‘ಕೇಂದ್ರದಲ್ಲಿ ಯುಪಿಎ ಸರ್ಕಾರ ಇದೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಜನರ ಮನೆ ಮನೆಗಳಿಗೆ ಹೋಗಿ ಸರ್ಕಾರದ ಸಾಧನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಸರ್ಕಾರದ ಕಾರ್ಯಕ್ರಮಗಳ ಕುರಿತು ಜನರ ಅಭಿಪ್ರಾಯ ಸಂಗ್ರಹಿಸಬೇಕು. ಅದೇ ರೀತಿ ದೇಶದಲ್ಲಿ ಬಿಜೆಪಿ ಮತ ಕಳವಿಗೆ ಇಳಿದು ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಮತ್ತು ದೇಶದ ಆಗುಹೋಗುಗಳನ್ನೂ ಜನರಿಗೆ ತಿಳಿಸುವ ಪ್ರಯತ್ನ ಅಗತ್ಯವಾಗಿದೆ’ ಎಂದರು.

ಇತ್ತೀಚೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ವಕೀಲ ಶೂ ಎಸೆಯಲು ಪ್ರಯತ್ನಿಸಿದ ಘಟನೆಯನ್ನು ಖಂಡಿಸಿದ ಅವರು,‘ಗಣತಂತ್ರ ವ್ಯವಸ್ಥೆ, ಸಂವಿಧಾನ ಅಪಾಯದಲ್ಲಿದೆ. ದೇಶದಲ್ಲಿ ನಿರುದ್ಯೋಗ, ಭ್ರಷ್ಟಾಚಾರ, ಮಹಿಳೆಯರ ಮೇಲೆ ಅತ್ಯಾಚಾರದಂಥ ಘಟನೆಗಳು ಹೆಚ್ಚುತ್ತಿವೆ’ ಎಂದು ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸಿದರು.

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥಗೌಡ ಮಾತನಾಡಿ,‘ರಾಜಕೀಯ ನಿಂತ ನೀರಲ್ಲ. ಬಹಳಷ್ಟು ಅವಕಾಶಗಳಿರುತ್ತವೆ. ಅನೇಕ ದೊಡ್ಡ ಮಟ್ಟದ ಮುಖಂಡರು ಯುವ ಕಾಂಗ್ರೆಸ್ ಮೂಲಕವೇ ರಾಜಕೀಯವಾಗಿ ಮೇಲೆ ಬಂದಿದ್ದಾರೆ. ಹಾಗಾಗಿ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ, ಪಕ್ಷ ಸಂಘಟನೆ ಕೆಲಸ ಮಾಡದವರನ್ನು ಯಾರೇ ಆಗಿದ್ದರೂ ಮುಲಾಜಿಲ್ಲದೆ ಬದಲಾಯಿಸಬೇಕಾಗುತ್ತದೆ’ ಎಂದರು.

ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾದ ದೀಪಿಕಾ ರೆಡ್ಡಿ, ಅಬ್ದುಲ್ ದೇಸಾಯಿ, ಇಲಾಹಿ ಸಿಕಂದರ್, ಜಿಲ್ಲಾಧ್ಯಕ್ಷ ಲಿಂಗೇಶ ಕಲ್ಗುಡಿ, ಜಿಲ್ಲಾ ದಿಶಾ ಸಮಿತಿ ಸದಸ್ಯ ದೊಡ್ಡಬಸವ ಬಯ್ಯಾಪುರ, ಲಾಡ್ಲೆಮಷಾಕ್ ಹಾಗೂ ಇತರರು ಮಾತನಾಡಿದರು.

ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಈರಣ್ಣ ಬದಾಮಿ ಅಧ್ಯಕ್ಷತೆ ವಹಿಸಿದ್ದರು. ವಿಜಯ ನಾಯಕ, ಮಾಲತಿ ನಾಯಕ, ಶಾರದಾ ಕಟ್ಟಿಮನಿ, ಬ್ಲಾಕ್ ಅಧ್ಯಕ್ಷ ಚಂದ್ರಶೇಖರ ನಾಲತ್ವಾಡ, ವೀರನಗೌಡ ಬದಾಮಿ, ಅರ್ಜುನಗೌಡ, ಬಾಹುಬಲಿ ಜೈನ್ ಸೇರಿದಂತೆ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕಿನ ಅನೇಕ ಪ್ರಮುಖರು, ಯುವ ಕಾರ್ಯಕರ್ತರು ಹಾಜರಿದ್ದರು.

ಪ್ರಾರಂಭದಲ್ಲಿ ಈಚೆಗೆ ನಿಧನರಾದ ಪಕ್ಷದ ಕಾರ್ಯಕರ್ತರಾದ ಶರಣಗೌಡ ಮಾಲಿಪಾಟೀಲ, ಬಾಷಾ ಸವಡಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಲಾಯಿತು. ಕೇದಾರನಾಥ ತುರಕಾಣಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.