ಕುಷ್ಟಗಿ: ಹಾಸನ ಜಿಲ್ಲೆಯ ಸಕಲೇಶಪುರದ ಬಳಿ ಶನಿವಾರ ಬೆಳಗಿನ ಜಾವ ಇಲ್ಲಿಯ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಪುತ್ರನ ಕಾರು ಅಪಘಾತವಾಗಿದ್ದು, ಅದರಲ್ಲಿದ್ದ ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಶರಣಬಸವ ಪಂಪನಗೌಡ ಮಾಲಿಪಾಟೀಲ (30) ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಅಮರೇಗೌಡರ ಪುತ್ರ, ಕಾಂಗ್ರೆಸ್ ಯುವ ಮುಖಂಡ ದೊಡ್ಡಬಸನಗೌಡ ಬಯ್ಯಾಪುರ ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ದೊಡ್ಡಬಸನಗೌಡ ಅವರು ಹಾಸನದ ಸ್ನೇಹಿತನನ್ನು ಭೇಟಿ ಮಾಡಲು ತೆರಳಿದ್ದಾಗ ಇಳಿಜಾರಿನ ತಿರುವಿನಲ್ಲಿ ಕಾರು ನಿದ್ರೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಎರಡು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದಿದೆ. ಘಟನೆ ನಂತರ ತೀವ್ರವಾಗಿ ಗಾಯಗೊಂಡಿದ್ದ ಶರಣಬಸವ ಸೇರಿದಂತೆ ಎಲ್ಲರನ್ನೂ ಹಾಸನದ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಬೆಳಿಗ್ಗೆ ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ.

ಮುಂದೆ ಕುಳಿತಿದ್ದ ದೊಡ್ಡಬಸನಗೌಡ ಮತ್ತು ಚಾಲಕರ ಬಳಿ ಕಾರಿನ ಏರ್ಬಲೂನ್ಗಳು ತೆರೆದುಕೊಂಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತ ಶರಣಬಸವ ಅವರ ಮೃತದೇಹದ ಅಂತ್ಯಕ್ರಿಯೆ ಪಟ್ಟಣದಲ್ಲಿ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಭಾನುವಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಶರಣು ಅವರ ಮದುವೆ ಇತ್ತೀಚೆಗಷ್ಟೆ ನಿಶ್ಚಯವಾಗಿತ್ತು ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.