ಕುಷ್ಟಗಿ: ಕೇಂದ್ರ ಸರ್ಕಾರ ಕಾರ್ಮಿಕರು, ರೈತರ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ಗುರುವಾರ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ಮತ್ತು ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು, ಪ್ರಮುಖರು ಪಾಲ್ಗೊಂಡಿದ್ದರು.

ಕಾರ್ಗಿಲ್ ಹುತಾತ್ಮ ಯೋಧ ಮಲ್ಲಯ್ಯ ವೃತ್ತದಿಂದ ಮತ್ತು ಇತರೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ನಂತರ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ರಾಷ್ಟ್ರಪತಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅಶೋಕ್ ಶಿಗ್ಗಾಂವಿ ಅವರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರಾದ ಚನ್ನಬಸಪ್ಪ, ಅಡಿವೆಪ್ಪ ಕುಷ್ಟಗಿ, ನಜೀರಸಾಬ್ ಮೂಲಿಮನಿ, ಆರ್.ಕೆ.ದೇಸಾಯಿ, ಕಲಾವತಿ ಮೆಣೆದಾಳ ಇತರರು, ‘ಅಮೆರಿಕ ಸಾಮ್ರಜ್ಯಶಾಹಿ ಒತ್ತಡಕ್ಕೆ ಒಳಗಾಗಿ ಶರಣಾಗಿರುವ ಪ್ರಧಾನಿ ನರೇಂದ್ರ ಮೋದಿ ದೇಶದ ದುಡಿಯುವ ಜನ ಮತ್ತು ರೈತರ ಹಕ್ಕುಗಳನ್ನು ದಮನ ಮಾಡಿದೆ. ದೇಶದ ಎಲ್ಲ ಸಾರ್ವಜನಿಕ ವ್ಯವಸ್ಥೆಯನ್ನು ಖಾಸಗೀಕರಣದ ಮೂಲಕ ಕಾರ್ಪೊರೇಟ್ ಹಿಡಿತಕ್ಕೆ ಒಪ್ಪಿಸುವ ಹುನ್ನಾರ ನಡೆದಿದೆ’ ಎಂದು ಆರೋಪಿಸಿದರು.

ಬಸವರಾಜ ಮೇಳಿ, ಅಕ್ಕಮ್ಮ ಮರೆಗೌಡ್ರ, ಶರಣಪ್ಪ ಬಾಚಲಾಪುರ, ಮೆಹಬೂಬ್ ದೋಟಿಹಾಲ್ ಸೇರಿದಂತೆ ಅನೇಕ ಪ್ರಮುಖರು ಹಾಜರಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಪಿಎಸ್ಐ ಹನುಮಂತಪ್ಪ ತಳವಾರ ನೇತೃತ್ವದಲ್ಲಿ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು.

ಅದೇ ರೀತಿ ಪಟ್ಟಣದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸೇರಿದಂತೆ ವಿವಿಧ ರಾಷ್ಟ್ರೀಕೃತ ಬ್ಯಾಂಕ್ ಶಾಖೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರಿಂದ ಯಾವುದೇ ವ್ಯವಹಾರ ನಡೆಸಲಿಲ್ಲ. ಮತ್ತು ಜೆಸ್ಕಾಂ ಶಾಖೆಯಲ್ಲಿನ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧದ ಅಸಮಾಧಾನ ಹೊರಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.