ಕುಷ್ಟಗಿ: ತಾಲ್ಲೂಕಿನ ಪುರ್ತಗೇರಿ ಗ್ರಾಮದ ಮಠದಲ್ಲಿ ಕೈಲಾಸಲಿಂಗ ಶಿವಾಚಾರ್ಯ ಹಿಮವತ್ ಕೇದಾರ ಅವರ 65ನೇ ಪುಣ್ಯಸ್ಮರಣೆ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಗುಡ್ಡಾಪುರ ದಾನಮ್ಮ ದೇವಿ ಪುರಾಣ ಹಾಗೂ ಪಂಡಿತ ಕೈಲಾಸಲಿಂಗ ಶ್ರೀಗಳ ಜೀವನ ಚರಿತ್ರೆ ಕುರಿತ ಪ್ರವಚನ ಮಂಗಲ ಕಾರ್ಯಕ್ರಮ ಮೇ 10ರಂದು ಸಂಜೆ 7 ಗಂಟೆಗೆ ನಡೆಯಲಿದೆ. ಅದಕ್ಕೂ ಮೊದಲು ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಅಯ್ಯಾಚಾರ, ಲಿಂಗದೀಕ್ಷೆ, ಮಹಾಗಣಾರಾಧನೆ ಮತ್ತು ಪಲ್ಲಕ್ಕಿ ಉತ್ಸವ ನೆರವೇರಲಿವೆ. ಚೌಳಹಿರಿಯೂರಿನ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ, ಮಾತಾ ಮಾಣಿಕೇಶ್ವರಿ ಸೇರಿದಂತೆ ವಿವಿಧ ಮಠಾಧೀಶರು ಸಾನ್ನಿಧ್ಯ ವಹಿಸುವರು.

ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ ಉದ್ಘಾಟಿಸುವರು. ಶಾಸಕರಾದ ವಿಜಯಾನಂದ ಕಾಶಪ್ಪನವರ, ನಾರಾ ಭರತರೆಡ್ಡಿ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ಎಸ್.ಜಿ. ನಂಜಯ್ಯನಮಠ, ಅಮರೇಗೌಡ ಬಯ್ಯಾಪುರ, ಬಳ್ಳಾರಿ ವಲಯದ ಹಿರಿಯ ಕಾನೂನು ಅಧಿಕಾರಿ ಬಿ.ಎಸ್.ಪಾಟೀಲ ಉಪಸ್ಥಿತರಿರುವರು. ಸಾಹಿತಿ ಶರಣಪ್ಪ, ಇಳಕಲ್ ತಾಲ್ಲೂಕು ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಚನ್ನಬಸಪ್ಪ ಲೆಕ್ಕಿಹಾಳ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-35-925011947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.