ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ಯಾದಿಗುಪ್ಪಾ ಗ್ರಾ.ಪಂ: ದುರುಗಮ್ಮ ಅಧ್ಯಕ್ಷೆ

Published 11 ಜುಲೈ 2024, 15:12 IST
Last Updated 11 ಜುಲೈ 2024, 15:12 IST
ಅಕ್ಷರ ಗಾತ್ರ

ಕುಷ್ಟಗಿ: ತಾಲ್ಲೂಕಿನ ಕ್ಯಾದಿಗುಪ್ಪಾ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ದುರುಗಮ್ಮ ಹುಲಪ್ಪ ಹರಿಜನ ಚುನಾಯಿತರಾಗಿದ್ದಾರೆ.

ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ದುರುಗಮ್ಮ 8 ಮತಗಳನ್ನು ಪಡೆದು ಚುನಾಯಿತರಾದರು. ಕಣದಲ್ಲಿದ್ದ ಅವರ ಪ್ರತಿಸ್ಪರ್ಧಿ ನೇತ್ರಾವತಿ ನಂದವಾಡಗಿ 7 ಮತಗಳನ್ನು ಪಡೆದರು. ಒಂದು ಮತ ತಿರಸ್ಕೃತಗೊಂಡಿದೆ ಎಂದು ಚುನಾವಣೆ ಪ್ರಕ್ರಿಯೆ ನಡೆಸಿದ ತಹಶೀಲ್ದಾರ್ ಶ್ರುತಿ ಮಳ್ಳಪ್ಪಗೌಡ್ರ ಘೋಷಿಸಿದರು. ಗ್ರಾಮ ಪಂಚಾಯಿತಿಯ 16 ಸದಸ್ಯರು ಚುನಾವಣೆ ಸಂದರ್ಭದಲ್ಲಿ ಹಾಜರಿದ್ದರು. ಕಂದಾಯ ನಿರೀಕ್ಷಕ ಮಹೇಶಗೌಡ, ಅಭಿವೃದ್ಧಿ ಅಧಿಕಾರಿ ಶ್ರೀಶೈಲ ಪೋಲೇಶಿ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT