ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ನಮ್ಮ ಆರೋಗ್ಯ, ನಮ್ಮ ಜವಾಬ್ದಾರಿ ಅಭಿಯಾನಕ್ಕೆ ಚಾಲನೆ

Published 8 ಜೂನ್ 2023, 5:24 IST
Last Updated 8 ಜೂನ್ 2023, 5:24 IST
ಅಕ್ಷರ ಗಾತ್ರ

ಕೊಪ್ಪಳ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಇತ್ತಿಚೆಗೆ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟಲು ಜನಸಮುದಾಯ ಜಾಗೃತಿಗೊಳಿಸಲು ಇತ್ತೀಚೆಗೆ ಸಸಿ ನೆಡಲಾಯಿತು. ‘ನಮ್ಮ ಭೂಮಿ, ನಮ್ಮ ಆರೋಗ್ಯ, ನಮ್ಮ ಜವಾಬ್ದಾರಿ’ ಅಭಿಯಾನ ಕೂಡ ನಡೆಯಿತು.

ಅಭಿಯಾನಕ್ಕೆ ಡಿಎಚ್‌ಒ ಡಾ.ಅಲಕನಂದಾ ಮಳಗಿ ಚಾಲನೆ ನೀಡಿ ‘ಜಿಲ್ಲೆಯಾದ್ಯಂತ ಆರೋಗ್ಯ ಕೇಂದ್ರಗಳಲ್ಲಿ ವಿಶ್ವ ಪರಿಸರ ದಿನ ಆಚರಿಸಿ ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟಲು ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ ಕಡಿಮೆ ಮಾಡಲು ಸೂಚಿಸಲಾಗಿದೆ. ದಿನನಿತ್ಯ ಬಳಕೆ ಹಾಗೂ ವಿಶೇಷ ದಿನಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳನ್ನು ಉಪಯೋಗಿಸುವ ಬದಲು ಗಾಜಿನ ಅಥವಾ ಲೋಹದ ಬಾಟಲ್‌ಗಳನ್ನು ಉಪಯೋಗಿಸಲು ಜನಸಮುದಾಯಕ್ಕೆ ಜಾಗೃತಿ ಮೂಡಿಸಬೇಕು’ ಎಂದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿ ಡಾ.ವೆಂಕಟೇಶ್ ಕೆ. ಮಾತನಾಡಿ ‘ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ಸೋಲಿಸೋಣ‘ ಎಂದಾಗಿದ್ದು, ಈ ಅಭಿಯಾನದ ಅಡಿಯಲ್ಲಿ ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರಗಳ ಮೇಲೆ ಕೇಂದ್ರಿಕರಿಸುತ್ತದೆ. ಪ್ಲಾಸ್ಟಿಕ್‌ನಿಂದ ಜಗತ್ತು ಸಂಕಷ್ಟಕ್ಕೆ ಒಳಗಾಗಿದೆ. ಪ್ರತಿ ವರ್ಷ 400 ಮಿಲಿಯನ್ ಟನ್‌ಗಳಿಗಿಂತ ಹೆಚ್ಚು ಪ್ಲಾಸ್ಟಿಕ್ ಅನ್ನು ಉತ್ಪಾದಿಸಲಾಗುತ್ತದೆ’ ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ರಾಮಾಂಜನೇಯ, ಜಿಲ್ಲಾ ವಿ.ಬಿ.ಡಿ ಸಲಹೆಗಾರ ರಮೇಶ್ ಕೆ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಸಿಬ್ಬಂದಿ ಇದ್ದರು.

ಶಾಲೆಯಲ್ಲಿ ಆಚರಣೆ: ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಸಹಯೋಗದಲ್ಲಿ 2023-24 ವರ್ಷದಲ್ಲಿ ದಾಖಲಾದ ನರ್ಸರಿ ಮತ್ತು ಎಲ್.ಕೆ.ಜಿ. ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಪರಿಸರ ದಿನ ಆಚರಿಸಲಾಯಿತು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಸವರಾಜ ಬಳ್ಳೊಳ್ಳಿ, ಕಾರ್ಯದರ್ಶಿ ಗವಿಸಿದ್ದಪ್ಪ ಮುದಗಲ್, ಪರಮೇಶ್ವರಪ್ಪ ಕೊಪ್ಪಳ, ಶರಣು ಅಗಡಿ, ಶಾಲಾ ಪ್ರಾಚಾರ್ಯೆ ವೈ. ಪದ್ಮಜಾ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಕೊಪ್ಪಳದ ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಪರಿಸರ ದಿನದ ಅಂಗವಾಗಿ ಸಸಿ ನೆಡಲಾಯಿತು
ಕೊಪ್ಪಳದ ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಪರಿಸರ ದಿನದ ಅಂಗವಾಗಿ ಸಸಿ ನೆಡಲಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT