ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಿ ಕದಡುವವರಿಗೆ ಪೊಲೀಸ್‌ ಠಾಣೆಯಲ್ಲಿ ರಾಜಮರ್ಯಾದೆ: ಬಸವರಾಜ ಬೊಮ್ಮಾಯಿ

Published 30 ಮೇ 2024, 14:08 IST
Last Updated 30 ಮೇ 2024, 14:08 IST
ಅಕ್ಷರ ಗಾತ್ರ

ಕೊಪ್ಪಳ: ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜಮಾರ್ಯಾದೆ ನೀಡಲಾಗುತ್ತಿದೆ. ಜೈ ಶ್ರೀರಾಮ್ ಎಂದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಇಲ್ಲಿ ಗುರುವಾರ ಗವಿಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿ ‘ಸಮಾಜಘಾತುಕ ಕೃತ್ಯ ನಡೆದಾಗ ಏನು ಆಗಿಯೇ ಇಲ್ಲ ಎನ್ನುವಂತೆ ಸರ್ಕಾರದವರು ಮಾತನಾಡುತ್ತಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡಲೇಬೇಕು. ಯಾವ ಅಧಿಕಾರಿಯೂ ಇಷ್ಟೊಂದು ಸ್ಪಷ್ಟವಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರಲಿಲ್ಲ’ ಎಂದರು.

‘ರಾಜ್ಯದಲ್ಲಿ ಹಗಲು ದರೋಡೆಯಾಗುತ್ತಿದೆ. ಈಶ್ಚರಪ್ಪ ತಪ್ಪು ಮಾಡದಿದ್ದರೂ ಅವರ ಮೇಲೆ ಆರೋಪ ಹೊರಿಸಿದ್ದರು. ಈಗ ಸರ್ಕಾರ ₹ 94 ಕೋಟಿ ತೆಲಂಗಾಣ ಚುನಾವಣೆಗೆ ನೀಡಿದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು’ ಎಂದರು.

‘ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊಗಳ ಪೆನ್‌ ಡ್ರೈವ್‌ ಪ್ರಕರಣ ಎಷ್ಟು ಹೇಯಕೃತ್ಯವೊ ಈ ವಿಡಿಯೊಗಳನ್ನು ಹಂಚಿದ್ದು ಕೂಡ ಅಷ್ಟೇ ಹೇಯ. ಎಸ್‌ಐಟಿ ತಂಡ ಈ ಎರಡೂ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಬೇಕು’ ಎಂದು ಒತ್ತಾಯಿಸಿದರು.

ಇದಕ್ಕೂ ಮೊದಲು ಮಠದ ಆವರಣವನ್ನೆಲ್ಲ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಜೊತೆ ಸುತ್ತಾಡಿದರು. ವಿಧಾನಪರಿಷತ್‌ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್‌ ಗುಳಗಣ್ಣನವರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT