ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಬ್ಲೀಗ್‌: ಉನ್ನತ ಮಟ್ಟದ ತನಿಖೆಗೆ ಚಿಂತನೆ –ಸವದಿ

Last Updated 7 ಏಪ್ರಿಲ್ 2020, 13:28 IST
ಅಕ್ಷರ ಗಾತ್ರ

ಕುಷ್ಟಗಿ (ಕೊಪ್ಪಳ ಜಿಲ್ಲೆ): ದೆಹಲಿಯ ನಿಜಾಮುದ್ದೀನ್‌ ಪ್ರದೇಶದ ತಬ್ಲೀಗ್‌ ಜಮಾತ್‌ ಕೇಂದ್ರ ಕಚೇರಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಬಂದಿರುವವರಲ್ಲಿಯೇ ಹೆಚ್ಚು ಕೋವಿಡ್‌–19 ಸೋಂಕು ದೃಢಪಟ್ಟಿದೆ. ಕೆಲವರು ಇನ್ನೂ ತಪಾಸಣೆಗೆ ಒಳಗಾಗಿಲ್ಲ. ಇದರ ಹಿಂದೆ ಏನಾದರೂ ಷಡ್ಯಂತ್ರ ಅಡಗಿದೆಯೆ ಎನ್ನುವ ಕುರಿತು ರಾಷ್ಟ್ರಮಟ್ಟದಲ್ಲಿ ಉನ್ನತ ಮಟ್ಟದ ತನಿಖೆ ನಡೆಸುವ ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಇಲ್ಲಿಯ ಕೊರೊನಾ ನಿರಾಶ್ರಿತರ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ದೆಹಲಿಗೆ ಹೋಗಿದ್ದವರು ತಮ್ಮ ಊರುಗಳಿಗೆ ಮರಳಿದ್ದರಿಂದ ಬೇರೆಯವರಿಗೂ ಸೋಂಕು ಹರಡಿದೆ. ತಪಾಸಣೆಗೆ ಒಳಗಾಗದವರು ಎಷ್ಟು ಜನ ಎಂಬುದನ್ನು ನಿಖರವಾಗಿ ಹೇಳಲಾಗುವುದಿಲ್ಲ. ಗುರುತು ಪತ್ತೆಯಾದ ನಂತರ ಆಯಾ ರಾಜ್ಯಗಳಿಗೆ ಮಾಹಿತಿ ಹೋಗಿದೆ. ಸೋಂಕು ದೃಢಪಟ್ಟಿರುವವರನ್ನು ಕರೆತಂದು ಚಿಕಿತ್ಸೆಗೆ ಒಳಪಡಿಸುವ ಕೆಲಸ ದೇಶದಾದ್ಯಂತ ನಡೆಯುತ್ತಿದೆ’ ಎಂದರು.

‘ತಬ್ಲೀಗ್‌ ಜಮಾತ್‌ ಕುರಿತು ಸಂಸದೆ ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆ ವೈಯಕ್ತಿಕ. ಅದು ಸರ್ಕಾರದ ಅಭಿಪ್ರಾಯವಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT