ಕೊಪ್ಪಳ: ತಾಲ್ಲೂಕಿನ ಹನುಮನಹಳ್ಳಿ ಸಮೀಪದಲ್ಲಿ ಚಿರತೆ ದಾಳಿಗೆ ಹನುಮನಹಳ್ಳಿ ಗ್ರಾಮದ ಷಣ್ಮುಖಪ್ಪ ಬಡಿಗೇರ್ ಎಂಬಾತನಿಗೆ ಕತ್ತಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳವಾರ ಸಂಜೆ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಸ್ಥಳೀಯರ ಮಾಹಿತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯಲು ಬೋನಿನೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಪ್ರಯತ್ನ ನಡೆದಿರುವಾಗ ಚಿರತೆ ಗಾಬರಿಗೊಂಡು ಓಡಿ ಹೋಗಿದೆ. ಆಗ, ಮರದ ಅಡಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ದಾಳಿ ನಡೆಸಿದೆ. ತಕ್ಷಣ ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಉಪ ವಲಯ ಅರಣ್ಯಾಧಿಕಾರಿ ಅಂದಪ್ಪ ಕುರಿ ‘ಚಿರತೆ ಹಿಡಿಯುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಹೇಳಿದರು.

ಸ್ಥಳಕ್ಕೆ ಶಾಸಕ ರಾಘವೇಂದ್ರ ಹಿಟ್ನಾಳ್ ಭೇಟಿ ನೀಡಿ ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.