ಮಂಗಳವಾರ, ಏಪ್ರಿಲ್ 13, 2021
31 °C

ಆನೆಗೊಂದಿ : ಬೋನಿಗೆ ಬಿದ್ದ ಚಿರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಂಗಾವತಿ : ತಾಲ್ಲೂಕಿನ ಆನೆಗೊಂದಿಯ ಐತಿಹಾಸಿಕ ದುರ್ಗಾದೇವಿ ಬೆಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೋಮವಾರ ಬೆಳಗ್ಗೆ ಚಿರತೆ ಬಿದ್ದಿದೆ.

ಅಂದಾಜು 6 ರಿಂದ 7 ವರ್ಷದ ಗಂಡು ಚಿರತೆ ಇದಾಗಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ ಮೂರು ತಿಂಗಳಿಂದ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಆನೆಗೊಂದಿ ವ್ಯಾಪ್ತಿಯಲ್ಲಿಯೇ ಬೀಡುಬಿಟ್ಟಿತ್ತು. ಕಳೆದ ತಿಂಗಳು ಇದೇ ಬೆಟ್ಟದಲ್ಲಿ ಚಿರತೆಯೊಂದನ್ನ ಸೆರೆಹಿಡಿಯಲಾಗಿತ್ತು. ಇದೀಗ ಎರಡನೇ ಚಿರತೆಯು ಬೋನಿಗೆ ಬೀಳುವ ಮೂಲಕ ಸುತ್ತಮುತ್ತಲಿನ ಗ್ರಾಮಸ್ಥರ ಆತಂಕ ದೂರವಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು