ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: 15 ದಿನದಿಂದ ಕಾಣಿಸಿಕೊಳ್ಳುತ್ತಿದ್ದ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಜನ

Last Updated 28 ಆಗಸ್ಟ್ 2022, 6:33 IST
ಅಕ್ಷರ ಗಾತ್ರ

ಕುಕನೂರು (ಕೊಪ್ಪಳ): ಕುಕನೂರು ತಾಲ್ಲೂಕಿನ ಗಾವರಾಳ ಗ್ರಾಮದ ಹೊರವಲಯದಲ್ಲಿಕಳೆದ 15 ದಿನಗಳಿಂದ ಆಗಾಗ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶನಿವಾರ ಮಧ್ಯರಾತ್ರಿ ಬಿದ್ದಿದೆ.

ಬೆಳಗಿನ ಜಾವ 5 ಗಂಟೆಗೆ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸಮೇತ ಬೋನನ್ನು ಸುರಕ್ಷಿತ ಪ್ರದೇಶಕ್ಕೆ ಕೊಂಡೊಯ್ದರು. ಮೊತ್ತೊಂದು ಚಿರತೆ ಇರುವ ಶಂಕೆ ಇರುವುದರಿಂದ ಮತ್ತೊಂದು ಬೋನು ಇಡಲಾಗಿದೆ.

ಕಳೆದ 15 ದಿನಗಳಿಂದ ಚಿರತೆ ಆಗಾಗ ಕಾಣಿಸಿಕೊಂಡು ಒಂದು ನಾಯಿಯನ್ನು ಕೊಂದು, ಮತ್ತೊಂದು ಸಾಕು ನಾಯಿಯನ್ನು ಗಾಯಗೊಳಿಸಿತ್ತು. ಒಮ್ಮೆ ಸಾರ್ವಜನಿಕರಿಗೆ ಕಾಣಿಸಿಕೊಂಡು ಮತ್ತಷ್ಟು ಆತಂಕ ಮೂಡಿಸಿತ್ತು. ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಚಿರತೆಯನ್ನು ಸುರಕ್ಷಿತ ಪ್ರದೇಶದಲ್ಲಿ ಬಿಡಲಾಗುವುದು. ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿ ಅಂದಪ್ಪ ಕುರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT