ಕೊಪ್ಪಳ: ‘ತಂಬಾಕು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಯುವಜನತೆ ತಂಬಾಕು ಸೇವನೆಯಿಂದ ದೂರವಿರಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಹೇಳಿದರು.

ಶನಿವಾರ ಚೈತನ್ಯ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಡಿಎಚ್ಒ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಸರ್ವೇಕ್ಷಣಾ ಘಟಕ ಮತ್ತು ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶದ ಸಹಯೋಗದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿ ವರ್ಷ ಮೇ 31ರಂದು ವಿಶ್ವ ತಂಬಾಕು ರಹಿತ ದಿನದ ಕಾರ್ಯಕ್ರಮ ಆಚರಿಸಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತದೆ. ಜನಸಾಮಾನ್ಯರನ್ನು ತಂಬಾಕಿನ ದುಷ್ಟರಿಣಾಗಳಿಂದ ರಕ್ಷಿಸಲು ಭಾರತ ಸರ್ಕಾರ ರಾಷ್ಟ್ರೀಯ ತಂಬಾಕು ನಿಯಂತ್ರಣ ಬಗ್ಗೆ 2003ರಲ್ಲಿ ಕೊಟ್ಪಾ ಜಾರಿ ಮಾಡಿದೆ’ ಎಂದರು.

ಡಿಎಚ್ಒ ಡಾ.ಲಿಂಗರಾಜ ಟಿ. ಮಾತನಾಡಿ, ‘ತಂಬಾಕು ಸೇವನೆಯಿಂದಾಗುವ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ ಬರುತ್ತವೆ’ ಎಂದು ಹೇಳಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವೀಂದ್ರನಾಥ್ ಎಂ.ಎಚ್., ಚೈತನ್ಯ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಕೆ. ಸತೀಶಕುಮಾರ, ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠನಾಧಿಕಾರಿ ಡಾ. ಶಶಿಧರ ಎ., ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಪ್ರಕಾಶ ಎಚ್., ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಮಾಂಜನೇಯ, ಕಿಮ್ಸ್ ಮೆಡಿಸಿನ್ ವಿಭಾಗದ ಡಾ.ಮನು, ಡಾ.ಅಂಜಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.