ಕಾಟಾಪೂರ (ಹನುಮಸಾಗರ): ‘ಗ್ರಂಥಾಲಯಗಳು ಜ್ಞಾನ ಸಂಪತ್ತಿನ ಆಗರ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಯುವಕರು, ಶಿಕ್ಷಕರು ಅದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಅವರು
ಹೇಳಿದರು.
ಸಮೀಪದ ಕಾಟಾಪೂರ ಗ್ರಾಮದಲ್ಲಿ ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯಿಂದ 2017-18ನೇ ಸಾಲಿನ ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆ ಅಡಿಯಲ್ಲಿ ₹15 ಲಕ್ಷ ಅನುದಾನದಲ್ಲಿ ನಿರ್ಮಿಸಿದ ಗ್ರಂಥಾಲಯ ಹಾಗೂ ₹30 ಲಕ್ಷ ಅನುದಾನದಲ್ಲಿ ನಿರ್ಮಿಸಿದ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.
’ಶೈಕ್ಷಣಿಕ ಸಾಧನೆಯ ಮೇಲೆ ಧನಾತ್ಮಕ ಪರಿಣಾಮ ಬೀರುವ ಹಲವಾರು ಅಂಶಗಳಲ್ಲಿ ಗ್ರಂಥಾಲಯದ ಸದ್ಬಳಕೆಯೂ ಒಂದು. ಭೇದ–ಭಾವವಿಲ್ಲದೆ ಯುವಕರು ಅಗತ್ಯ ಜ್ಞಾನ ಪಡೆದುಕೊಳ್ಳಬಹುದಾಗಿದೆ‘ ಎಂದು ಹೇಳಿದರು.
‘ಸಾಂಸ್ಕೃತಿಕ, ಬೌದ್ಧಿಕ ಹಾಗೂ ಮಾನಸಿಕ ಬೆಳವಣಿಗೆಗೆ ಗ್ರಂಥಾಲಯಗಳು ಪೂರಕ’ ಎಂದು ಅವರು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಮೈಲಾರಪ್ಪ ಪಾವಿ, ಉಪಾಧ್ಯಕ್ಷೆ ಕಸ್ತೂರೆವ್ವ ಅಮರಾವತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಹರೀಶ, ಮುಖಂಡರಾದ ಸಂಗಯ್ಯ ವಸ್ತ್ರದ, ಮಹಾಂತೇಶ ಅಗಸಿಮುಂದಿನ, ಮುತ್ತಣ್ಣ ಕರಡಿ, ಇರ್ಫಾನ್, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಶಿಕ್ಷಕರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.