ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಷಕರಿಂದ ಜೀವ, ಶಿಕ್ಷಕರಿಂದ ಜೀವನ: ಸಚಿವ ಆನಂದ್ ಸಿಂಗ್

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ: ಸಚಿವ ಆನಂದ್‌ ಸಿಂಗ್‌ ಹೇಳಿಕೆ
Last Updated 5 ಸೆಪ್ಟೆಂಬರ್ 2022, 15:27 IST
ಅಕ್ಷರ ಗಾತ್ರ

ಕೊಪ್ಪಳ: ‘ಮಕ್ಕಳಿಗೆ ತಂದೆ ತಾಯಿ ಜನ್ಮ ನೀಡುತ್ತಾರೆ. ಆದರೆ, ಸುಂದರ ಬದುಕು ಕಟ್ಟಿಕೊಳ್ಳಲು ಮಾರ್ಗದರ್ಶನ ಮಾಡುವ ಮೂಲಕ ಶಿಕ್ಷಕರು ಜೀವನವನ್ನೇ ನೀಡುತ್ತಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಶಿಕ್ಷಕರ ದಿನದ ಅಂಗವಾಗಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಕಾಯಕ ಯೋಗಿಗಳಂತೆ ಶ್ರಮಿಸುತ್ತಾರೆ. ಸೋಲು, ಗೆಲುವುಗಳನ್ನು ಸಮವಾಗಿ ಸ್ವೀಕರಿಸುವ ದೃಢ ಮನಸ್ಥಿತಿ ನಿರ್ಮಿಸುತ್ತಾರೆ. ವಿದ್ಯಾರ್ಥಿಗಳನ್ನು ಸ್ವಂತ ಮಕ್ಕಳಂತೆ ಭಾವಿಸಿ ಅವರ ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ತಮ್ಮ ಇಡೀ ಜೀವನವನ್ನು ಅರ್ಪಿಸುತ್ತಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಸದ ಸಂಗಣ್ಣ ಕರಡಿ ಮಾತನಾಡಿ ‘ವಿದ್ಯಾರ್ಥಿಗಳ ಸಾಧನೆಗಾಗಿ ಶಕ್ತಿ ವ್ಯಯಿಸುವ ಶಿಕ್ಷಕ ಬಹಳಷ್ಟು ಕಡೆ ವಿದ್ಯಾರ್ಥಿಗಳ ಸಾಧನೆ ನಂತರ ಮರೆಯಾಗುತ್ತಾನೆ. ಆದರೆ, ಎಂದಿಗೂ ತನ್ನ ವಿದ್ಯಾರ್ಥಿಗಳ ಸಾಧನೆಗೆ ಅಡ್ಡಿಯಾಗುವುದಿಲ್ಲ. ಅಂಥನಿಸ್ವಾರ್ಥ ಮನೋಭಾವಕಾಣವುದು ಶಿಕ್ಷಕವೃತ್ತಿಯಲ್ಲಿಮಾತ್ರ. ಪಾಠಹೇಳುವುದರ ಜೊತೆಗೆಬೇರೆಜವಾಬ್ದಾರಿಗಳನ್ನೂ ನಿಭಾಯಿಸಬೇಕಾದ ಕಾರಣ ಶಿಕ್ಷಕರ ಮೇಲೆ ಒತ್ತಡ ಹೆಚ್ಚಾಗಿದೆ’ ಎಂದರು.

ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ ‘ಶಿಕ್ಷಕ ಎಂದರೆ ಅನುಭವದ ಬುತ್ತಿ. ತನ್ನ ಬುತ್ತಿಯಲ್ಲಿರುವ ಎಲ್ಲವನ್ನೂ ವಿದ್ಯಾರ್ಥಿಗಳಿಗೆ ಧಾರೆ ಎರೆಯುವ ನಿಸ್ವಾರ್ಥ ಹೃದಯಿ. ಮುಖ್ಯವಾಗಿ ಪ್ರಾಥಮಿಕ ಹಂತದ ಶಿಕ್ಷಣ ನೀಡುವ ಶಿಕ್ಷಕರೇ ದೇಶಕ್ಕೆ ಹೆಚ್ಚಿನ ಕೊಡುಗೆ ನೀಡುತ್ತಾರೆ’ ಎಂದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿತರಿಸಲು ಏಕಸ್ ಸಂಸ್ಥೆಯ ಸಹಯೋಗದಲ್ಲಿ ತಯಾರಿಸಿದ ಚಿಗುರು ಪುಸ್ತಕಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಬಿಡುಗಡೆ ಮಾಡಿದರು.2022-23ನೇ ಸಾಲಿನಲ್ಲಿ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಜಿಲ್ಲಾ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮುತ್ತರೆಡ್ಡಿ ರಡ್ಡೇರ್ ಸ್ವಾಗತಿಸಿದರು. ನಗರಸಭೆ ಅಧ್ಯಕ್ಷೆ ಶಿವಗಂಗಾ ಭೂಮಕ್ಕನವರ, ಶಾಸಕ ಬಸವರಾಜ ದಢೇಸೂಗೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ, ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು, ಜಿಲ್ಲಾ ಪಂಚಾಯಿತಿ ಸಿಇಒ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗಲಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT