ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಾವರಗೇರಾ | ಮದ್ಯ ಮಾರಾಟ: ಮೂವರ ವಿರುದ್ಧ ಪ್ರಕರಣ ದಾಖಲು

Published 1 ಜುಲೈ 2024, 16:25 IST
Last Updated 1 ಜುಲೈ 2024, 16:25 IST
ಅಕ್ಷರ ಗಾತ್ರ

ತಾವರಗೇರಾ: ಸಮೀಪದ ಹೊಮ್ಮಿನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಒತ್ತಾಯಿಸಿ ತಾವರಗೇರಾ ಪೊಲೀಸ್ ಠಾಣೆಗೆ ಮಹಿಳೆಯರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಗ್ರಾಮದ ಮಹಿಳೆಯರ ಮನವಿಗೆ ಸ್ಪಂದಿಸಿದ ತಾವರಗೇರಾ ಪೊಲೀಸ್ ಠಾಣೆ ಪಿಎಸ್‌ಐ ಮಲ್ಲಪ್ಪ ವಜ್ರದ ಹಾಗೂ ಸಿಬ್ಬಂದಿ ದಾಳಿ ನಡೆಸಿ, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮೂವರಾದ ತಿಮ್ಮನಗೌಡ, ಮಹದೇವಗೌಡ ಮತ್ತು ಒಬ್ಬ ಮಹಿಳೆಯ ವಿರುದ್ಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈಚೆಗೆ ಪೊಲೀಸ್ ಠಾಣೆಗೆ ಆಗಮಿಸಿದ ಹೊಮ್ಮಿನಾಳ ಗ್ರಾಮದ 10ಕ್ಕೂ ಹೆಚ್ಚು ಜನ ಮಹಿಳೆಯರು ‘ಅಕ್ರಮ ಮದ್ಯ ಮಾರಾಟದಿಂದ ಕುಟುಂಬಗಳಲ್ಲಿ ಆರ್ಥಿಕ ಸಮಸ್ಯೆ ಹೆಚ್ಚಾಗಿದೆ. ಯುವಕರು ಸಹ ಕುಡಿಯುವ ಚಟ ಕಲಿಯುತ್ತಿದ್ದಾರೆ. ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಅಕ್ರಮ ಮಾರಾಟ ತಡೆಗಟ್ಟುವಂತೆ’ ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT