ಗಂಗಾವತಿ: ನಗರಸಭೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಲಾಕ್‌ಡೌನ್ ನಡುವೆಯೂ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಕಾರಣ ಅಂಗಡಿಯೊಂದನ್ನು ಜಪ್ತಿ ಮಾಡಿದರು.
ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ಮಾತನಾಡಿ,‘ಜಿಲ್ಲೆಯಲ್ಲಿ ಲಾಕ್‍ಡೌನ್ ಜಾರಿ ಮಾಡಲಾಗಿದೆ. ಅನಗತ್ಯವಾಗಿ ಓಡಾಡುವಂತಿಲ್ಲ. ವ್ಯಾಪಾರಿಗಳೂ ವ್ಯಾಪಾರ ಮಾಡುವಂತಿಲ್ಲ. ಆದರೆ ನಗರದಲ್ಲಿರುವ ಬಟ್ಟೆ ಅಂಗಡಿಯವರು ಕದ್ದು-ಮುಚ್ಚಿ ವ್ಯಾಪಾರ ನಡೆಸುತ್ತಿದ್ದಾರೆ ಎಂದು ದೂರುಗಳು ಬಂದಿದ್ದವು. ಹಾಗಾಗಿ ಏಕಾಏಕಿ ದಾಳಿ ನಡೆಸಲಾಯಿತು. ಆರಾಧನಾ ಬಟ್ಟೆ ಅಂಗಡಿಯಲ್ಲಿ ಮಾಲೀಕರು ವ್ಯಾಪಾರ ನಡೆಸುತ್ತಿರುವುದು ಕಂಡುಬಂತು. ಅಂಗಡಿ ಜಪ್ತಿ ಮಾಡಲಾಗಿದೆ’ ಎಂದು ಹೇಳಿದರು.
ಕಂದಾಯ ನಿರೀಕ್ಷಕ ಮಂಜುನಾಥ ಹಿರೇಮಠ, ನಗರಸಭೆ ಸಿಬ್ಬಂದಿ ನಾಗರಾಜ, ಪರಶುರಾಮ ಹಾಗೂ ಇತರರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.