ಕೊಪ್ಪಳ: ಕೊರೊನಾ ಮೂರನೇ ಅಲೆಯ ಆತಂಕದ ನಡುವೆಯೂ ಸರ್ಕಾರ ಲಾಕ್‌ಡೌನ್ ತೆರವುಗೊಳಿಸಿ ಆದೇಶ ಹೊರಡಿಸಿದ್ದು, ಸೋಮವಾರ ಜನಜೀವನ ಸಹಜಸ್ಥಿತಿಗೆ ಮರಳಿತು.

ಜನರು ಮಾಸ್ಕ್ ಇಲ್ಲದೇ ಸಂಚರಿಸುವುದು ಸಾಮಾನ್ಯವಾಗಿತ್ತು. ಮಾರುಕಟ್ಟೆ ಕಳೆದ 15 ದಿನಗಳ ಹಿಂದೆಯೇ ತೆರೆದಿದ್ದರೂ ಸಂಜೆ 5 ಗಂಟೆಯ ನಂತರ ಬಂದ್ ಆಗುತ್ತಿತ್ತು. ಈಗ ರಾತ್ರಿ 9ರವರೆಗೆ ಮಾರಾಟಕ್ಕೆ ಅವಕಾಶ ನೀಡಿದ್ದರಿಂದ ಜನರು ಮಾರುಕಟ್ಟೆಯಲ್ಲಿ ವಿವಿಧ ವಸ್ತುಗಳ ಖರೀದಿಗೆ ಬಂದಿದ್ದರು.

ದೇವಸ್ಥಾನದಲ್ಲಿ ದರ್ಶನಕ್ಕೆ ಅವಕಾಶ: ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದ ದರ್ಶನಕ್ಕೆ ಅವಕಾಶ ನೀಡಿದ್ದರಿಂದ ಜನರು ಗವಿಮಠದ ಗವಿಸಿದ್ಧೇಶ್ವರ, ಹುಲಿಗಿಯ ಹುಲಿಗೆಮ್ಮ ದೇವಿ, ಅಂಜನಾದ್ರಿಯ ಅಂಜನೇಯ್ಯ ಸ್ವಾಮಿ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದರು. ವಿಶೇಷ ಪೂಜೆಗೆ ಅವಕಾಶ ಇರಲಿಲ್ಲ. ಎಲ್ಲ ದೇವಸ್ಥಾನಗಳನ್ನು ಸ್ವಚ್ಛಗೊಳಿಸಿ ಸ್ಯಾನಿಟೈಸರ್ ಸಿಂಪಡಿಸಲಾಗಿತ್ತು.

ಭಕ್ತರು ಮಾಸ್ಕ್ ಧರಿಸಬೇಕು. ಪರಸ್ಪರ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಲಾಗಿತ್ತು. ಹುಲಿಗಿ, ಅಂಜನಾದ್ರಿಯಲ್ಲಿ ಸೋಮವಾರ ಒಂದೇ ದಿನ ಸಾವಿರಕ್ಕೂ ಹೆಚ್ಚು ಜನರು ದರ್ಶನ ಪಡೆದರು ಎಂದು ದೇವಸ್ಥಾನದ ಆಡಳಿತಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ತಿಳಿಸಿದರು.

ಮಂಗಳವಾರ, ಶುಕ್ರವಾರ ಮತ್ತು ಶನಿವಾರ ಈ ಎರಡು ದೇವಸ್ಥಾನಗಳಲ್ಲಿ ಸಾವಿರಾರು ಭಕ್ತರು ಭಾಗವಹಿಸುವ ಕಾರಣ ಬಿಗಿಬಂದೋಬಸ್ತ್ ಮಾಡಿ ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ನಿಗಾ ವಹಿಸಲಾಗುವುದು ಎಂದು ಅವರು ತಿಳಿಸಿದರು.

ಬಾರ್ ಮತ್ತು ರೆಸ್ಟೋರೆಂಟ್‌ಗಳು ರಾತ್ರಿ 9 ಗಂಟೆಯವರೆಗೆ ತೆರೆದಿದ್ದವು. ಕೇಂದ್ರ ಬಸ್ ನಿಲ್ದಾಣಗಳಲ್ಲಿ ಎಲ್ಲ ಬಸ್‌ಗಳು ಪೂರ್ಣ ಪ್ರಮಾಣದಲ್ಲಿ ಸಂಚಾರ ನಡೆಸಿದವು. ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ಈ ಕುರಿತು ಜಿಲ್ಲಾಡಳಿತ ಮಾರ್ಗಸೂಚಿಯನ್ನು ಹೊರಡಿಸಿದ್ದು, ಮದುವೆಗೆ 100 ಜನರು, ಮಾಲ್ ಮತ್ತು ಚಿತ್ರಮಂದಿರಗಳಿಗೆ ಇನ್ನೂ ಅವಕಾಶವಿಲ್ಲ. ಜಿಮ್ ಮತ್ತು ಈಜುಗೊಳ ಆರಂಭವಾಗಿದ್ದರೂ ಕ್ರೀಡಾ ಚಟುವಟಿಕೆಗೆ ಮಾತ್ರ ಸೀಮಿತಗೊ
ಳಿಸಲಾಗಿದೆ.

ಸಾರ್ವಜನಿಕರಿಗೆ ಪ್ರವೇಶ ಇಲ್ಲ. ಒಳಾಂಗಣ ಕ್ರೀಡಾಂಗಣದಲ್ಲಿ ಸ್ಪರ್ಧೆಗೆ ಅವಕಾಶ ನೀಡಲಾಗಿದ್ದು, ಪ್ರೇಕ್ಷಕರಿಗೆ ಅವಕಾಶ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.