ಕೊಪ್ಪಳ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಆ.14 ರಂದು ಜಿಲ್ಲೆಯ ಗಂಗಾವತಿ, ಕುಷ್ಟಗಿ, ಯಲಬುರ್ಗಾ ಮತ್ತು ಕೊಪ್ಪಳ ನ್ಯಾಯಾಲಯಗಳಲ್ಲಿ ಏರ್ಪಡಿಸಲಾಗಿದ್ದ ಮೆಗಾ ಲೋಕ ಇ-ಆದಾಲತ್‌ನಲ್ಲಿ 6768 ಪ್ರಕರಣ ಇತ್ಯರ್ಥ ಪಡಿಸಲಾಗಿದೆ.

ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿರುವ ಚಾಲ್ತಿ ಪ್ರಕರಣ ಹಾಗೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ವ್ಯಾಜ್ಯ ಪೂರ್ವ ಪ್ರಕರಣ ಇತ್ಯರ್ಥ ಪಡಿಸಲಾಯಿತು. ಅವುಗಳಲ್ಲಿ 99 ಮೋಟಾರು ವಾಹನ ಅಪಘಾತ ಪರಿಹಾರ, 357 ಸಿವಿಲ್,22 ರಾಜಿ ಆಗಬಹುದಾದ ಕ್ರಿಮಿನಲ್, 77 ಚೆಕ್ ಬೌನ್ಸ್ ಪ್ರಕರಣ, 2239 ಇತರೆ ಕ್ರಿಮಿನಲ್, 3720 ವ್ಯಾಜ್ಯ ಇತರ ಪೂರ್ವ, 3 ವಿದ್ಯುತ್/ನೀರಿನ ಬಿಲ್, 251 ಇತರೆ ಸೇರಿದಂತೆ ಒಟ್ಟು 6,768 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿ ಒಟ್ಟು 10,53,44,612 ಮೊತ್ತದ ಪರಿಹಾರ ವಿತರಿಸಲಾಗಿದೆ.

ಲೋಕ ಅದಾಲತ್‌ಗೆ ಸಹಕರಿಸಿದ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ಸಂಧಾನಕಾರರಿಗೆ, ವಕೀಲರ ಸಂಘಗಳ ಅಧ್ಯಕ್ಷರು ಮತ್ತು ಸರ್ವ ಸದಸ್ಯರಿಗೆ, ಬ್ಯಾಂಕ್/ಇನ್ಸುರೆನ್ಸ್ ಕಂಪನಿ ಮ್ಯಾನೇಜರ್‌ಗಳಿಗೆ, ಕಕ್ಷಿದಾರರಿಗೆ ಮತ್ತು ನ್ಯಾಯಾಲಯಗಳ ಸಿಬ್ಬಂದಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಎಲ್.ವಿಜಯಲಕ್ಷ್ಮಿದೇವಿ ಹಾಗೂ ಸದಸ್ಯ ಕಾರ್ಯದರ್ಶಿ ದೇವೇಂದ್ರ ಪಂಡಿತ್ಸಹಕಾರವಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.