ಕೊಪ್ಪಳ: ‘ಡಿ.13ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಸದುಪಯೋಗವನ್ನು ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್. ದರಗದ ಹೇಳಿದರು.

‘ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ರಾಜಿ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಭೂ- ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು. ಮೋಟಾರು ಅಪಘಾತ ಪರಿಹಾರ ಪ್ರಕರಣಗಳ ಮತ್ತು ವೈವಾಹಿಕ ಪ್ರಕರಣಗಳನ್ನು ಇತ್ಯರ್ಥಗೊಳಿಸಬಹುದು’ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಸಂತೋಷ ಜೋಶಿ, ಇಸ್ಮಾಯಿಲ್, ಬಸವರಾಜ, ವಾರ್ತಾ ಇಲಾಖೆಯ ಸಹಾಯಕ ನಿರ್ದೆಶಕ ಸುರೇಶ ಜಿ. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.