ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾವರಗೇರಾ: ಮತದಾನ ಜಾಗೃತಿ ಜಾಥಾ

Published 23 ಏಪ್ರಿಲ್ 2024, 16:11 IST
Last Updated 23 ಏಪ್ರಿಲ್ 2024, 16:11 IST
ಅಕ್ಷರ ಗಾತ್ರ

ತಾವರಗೇರಾ: ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು  ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಹಶೀಲ್ದಾರ್ ರವಿ ಅಂಗಡಿ ಹೇಳಿದರು.

ಪಟ್ಟಣ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಸ್ವಿಪ್ ಸಮಿತಿ, ತಾಲ್ಲೂಕು ಚುನಾವಣಾಧಿಕಾರಿಗಳ ಕಾರ್ಯಾಲಯ, ಸ್ಥಳೀಯ ಪ.ಪಂ ಆಡಳಿತ ಆಶ್ರಯದಲ್ಲಿ ಮಂಗಳವಾರ ನಡೆದ ನಮ್ಮ ಹಕ್ಕು ನಮ್ಮ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ಥಳೀಯ ಪಪಂ ಅಧಿಕಾರಿಗಳು, ಮತಗಟ್ಟೆ ಅಧಿಕಾರಿಗಳು ಮತ್ತು ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಹಕಾರ, ಜಾಗೃತಿಯಿಂದ ಶೇ 90ಕ್ಕೂ ಹೆಚ್ಚು ಮತದಾನ ಗುರಿ ಹೊಂದಲಾಗಿದೆ. ಆದ್ದರಿಂದ ತಮ್ಮ ಮತವನ್ನು ಚಲಾಯಿಸಬೇಕು ಎಂದು ಹೇಳಿದರು.

ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚಾರ ಮಾಡುವ ಮೂಲಕ ಜಾಗೃತಿ ಮೂಡಿಸಲಾಯಿತು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಬಿಸಾಬ ಖುದನ್ನವರ, ನಾಡ ತಹಶೀಲ್ದಾರ್ ಪ್ರಕಾಶ , ಕಂದಾಯ ನಿರೀಕ್ಷಕ ಶರಣಪ್ಪ ದಾಸರ, ಮತ್ತು ಮತಗಟ್ಟೆ ಅಧಿಕಾರಿಗಳು, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿ, ಜೆಸ್ಕಾಂ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಪ.ಪಂ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT