ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ: ಕೆಆರ್‌ಪಿಪಿಯಿಂದ 8 ಕ್ಷೇತ್ರಗಳಲ್ಲಿ ಸ್ಪರ್ಧೆ

Published 4 ಜನವರಿ 2024, 5:51 IST
Last Updated 4 ಜನವರಿ 2024, 5:51 IST
ಅಕ್ಷರ ಗಾತ್ರ

ಕೊಪ್ಪಳ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ರಾಜ್ಯದ ಎಂಟು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು‌ ಮುಂದಾಗಿದೆ.

ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಬೀದರ್, ಬಾಗಲಕೋಟೆ, ಚಿಕ್ಕಬಳ್ಳಾಪುರ ಹಾಗೂ ವಿಜಯಪುರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಮನೋಹರಗೌಡ ಹೇರೂರು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಬಾದವಾಡಗಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು‌.

ಫೆಬ್ರವರಿ 4ರಂದು ಕೊಪ್ಪಳದಲ್ಲಿ ಪಕ್ಷದ ಎಲ್ಲ ತಾಲ್ಲೂಕು ಘಟಕಗಳ ಪ್ರಮುಖರ ಸಮಾವೇಶ ನಡೆಯಲಿದ್ದು, ಅಂದು ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಪಕ್ಷದ ರಾಜ್ಯಾಧ್ಯಕ್ಷರೂ ಆದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಘೋಷಣೆ ಮಾಡುವರು ಎಂದು ಹೇಳಿದರು.

ಹಿಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ‌ ಪಕ್ಷದಿಂದ 41 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು‌. ಒಂದು ಕ್ಷೇತ್ರದಲ್ಲಿ ಪಕ್ಷ ಗೆಲುವು ಸಾಧಿಸಿತ್ತು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮನೋಹರಗೌಡ ಹೇರೂರು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಬಾದವಾಡಗಿ

ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮನೋಹರಗೌಡ ಹೇರೂರು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಬಾದವಾಡಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT