ಕೊಪ್ಪಳ: ಇಲ್ಲಿನ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಕಿಮ್ಸ್) ವಿದ್ಯಾಭ್ಯಾಸ ಮಾಡುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುರುವಾರ ವಾಣಿಜ್ಯ ಬಳಕೆಯ ಸಿಲಿಂಡರ್ ಕೊರತೆ ಕಾಡಿದ್ದು ಮಧ್ಯಾಹ್ನದ ಊಟಕ್ಕೆ ಪರದಾಡುವಂತಾಯಿತು.

360 ವಿದ್ಯಾರ್ಥಿಗಳನ್ನು ಹೊಂದಿರುವ ಹಾಸ್ಟೆಲ್ನಲ್ಲಿ ಸಿಲಿಂಡರ್ ಕೊರತೆಯಿಂದ ಮಧ್ಯಾಹ್ನ ಅಡುಗೆ ಕೋಣೆ ಬಂದ್ ಮಾಡಲಾಗಿತ್ತು. ಬೆಳಿಗ್ಗೆಯ ಉಪಾಹಾರ ತಯಾರಿಸಲು ಬೇಕಾದಷ್ಟು ಮಾತ್ರ ಸಿಲಿಂಡರ್ ಇತ್ತು. ಆದ್ದರಿಂದ ವಿದ್ಯಾರ್ಥಿಗಳು ಊಟಕ್ಕಾಗಿ ಹೋಟೆಲ್ಗಳ ಮೊರೆ ಹೋದರು. ಸಂಜೆ ಸಮಸ್ಯೆ ಪರಿಹಾರವಾಯಿತು.

‘ಸಿಲಿಂಡರ್ ಖಾಲಿಯಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾದ ಮಾಹಿತಿ ಬಂದ ತಕ್ಷಣ ಜಿಲ್ಲಾಧಿಕಾರಿ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸಿದ್ದೇನೆ. ಸಂಜೆ ಸಿಲಿಂಡರ್ ಲಭಿಸಿವೆ’ ಎಂದು ಕಿಮ್ಸ್ ನಿರ್ದೇಶಕ ಡಾ. ವಿಜಯನಾಥ ಇಟಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.