ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಸ್ಟ್ರಾಂಗ್‌ ರೂಮ್‌ಗೆ ಇನ್ನಷ್ಟು ಕ್ಯಾಮೆರಾ ಅಳವಡಿಸಲು ಸೂಚನೆ

Published 16 ಮೇ 2024, 13:45 IST
Last Updated 16 ಮೇ 2024, 13:45 IST
ಅಕ್ಷರ ಗಾತ್ರ

ಕೊಪ್ಪಳ: ಭಾರತ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕೂರ್ಮಾರಾವ್ ಎಂ. ಅವರು ಗುರುವಾರ ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದಲ್ಲಿರುವ ಸ್ಟ್ರಾಂಗ್‌ ರೂಮ್‌ಗೆ ಭೇಟಿ ನೀಡಿದರು.

ಕೊಪ್ಪಳ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 7ರಂದು ನಡೆದ ಮತದಾನದ ಬಳಿಕ ಮತಯಂತ್ರಗಳಲ್ಲಿ ಇಲ್ಲಿ ಭದ್ರತಾ ಸರ್ಪಗಾವಲಿನ ನಡುವೆ ಇರಿಸಲಾಗಿದೆ. ಮತಯಂತ್ರಗಳಿಗೆ ಒದಗಿಸಲಾದ ಭದ್ರತೆ, ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ ಮತ್ತು ಭದ್ರತಾ ಸಿಬ್ಬಂದಿಗಳ ಕುರಿತು ಅವರು ಪರಿಶೀಲಿಸಿದರು. ಬಳಿಕ ಇನ್ನಷ್ಟು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಅವರು ಸೂಚಿಸಿದರು.

ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್  ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಡಿಎಸ್‌ಪಿ ಮುತ್ತಣ್ಣ ಸವರಗೋಳ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT