ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಚನ ಸಾಹಿತ್ಯದ ರಕ್ಷಕ ಮಾಚಿದೇವ: ನಿಂಗಪ್ಪ ಮೂಲಿಮನಿ

Last Updated 2 ಫೆಬ್ರುವರಿ 2022, 3:29 IST
ಅಕ್ಷರ ಗಾತ್ರ

ಹನುಮಸಾಗರ: ಮಡಿವಾಳ ಮಾಚಿದೇವರು ವಚನ ಸಾಹಿತ್ಯದ ರಕ್ಷಕರಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿದ್ದು, ಕಲ್ಯಾಣದಲ್ಲಿ ಶರಣರ ವಿರುದ್ಧ ಎದ್ದ ದಂಗೆಯ ಸಮಯದಲ್ಲಿ ಹಲವಾರು ಶರಣರನ್ನು ರಕ್ಷಿಸಿದ್ದರು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಂಗಪ್ಪ ಮೂಲಿಮನಿ ಹೇಳಿದರು.

ಮಂಗಳವಾರ ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಮಡಿವಾಳ ಮಾಚಿದೇವರ ಜಯಂತಿಯಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಸಮಾನತೆ, ಜಾತಿಯತೆ ನಿರ್ಮೂಲನೆ, ಸ್ತ್ರೀ ಸ್ವಾತಂತ್ರ್ಯ ಹನ್ನೆರಡನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ಮೂಲ ಉದ್ದೇಶವಾಗಿತ್ತು. ಅಂದಿನ ಸಾಮಾಜಿಕ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವರು ವಚನ ಗ್ರಂಥಗಳನ್ನು ಸಂರಕ್ಷಿಸುವ ಮೂಲಕ ಶರಣರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಅವರು ತಿಳಿಸಿದರು.

ಪಂಚಾಯಿತಿ ಅಧ್ಯಕ್ಷೆ ಶಂಕ್ರಮ್ಮ ನಿರ್ವಾಣಿ ಹಾಗೂ ಉಪಾಧ್ಯಕ್ಷ ಮಂಜುನಾಥ ಹುಲ್ಲೂರ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT